





ಕಾಣಿಯೂರು: ಪುತ್ತೂರಿನ ದರ್ಬೆ ಆಫೀಸರ್ಸ್ ಕ್ಲಬ್ ನಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ವಿಕಾಸ್ (9ನೇ), ಹಿತೇಶ್ ಎನ್ (9ನೇ), ಹಾಗೂ ಹರ್ಷ ಪಿ ವಿ (9ನೇ) ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಸಂಸ್ಥೆಯ ಟ್ರಸ್ಟಿ ಹರಿಚರಣ್ ರೈ ಮಾದೋಡಿ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಇವರು ಮಾರ್ಗದರ್ಶನ ನೀಡಿರುತ್ತಾರೆ.












