ಆ.31: ಪುತ್ತೂರು ತಾ|ಮಟ್ಟದ ಕ್ರೀಡಾಕೂಟ-ಕೊಂಬೆಟ್ಟು ಕ್ರೀಡಾಂಗಣ
ಆ.30: ಕಡಬ ತಾ|ಮಟ್ಟದ ಕ್ರೀಡಾಕೂಟ-ಸವಣೂರು ಪ.ಪೂ. ಕಾಲೇಜು ಕ್ರೀಡಾಂಗಣ
ಪುತ್ತೂರು: ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ. ಇದರ ಸಂಯುಕ್ತಾಶ್ರಯದಲ್ಲಿ ನಡೆಯುವ 2025-26ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆ.31ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣ ಹಾಗೂ ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆ.30ರಂದು ಸವಣೂರು ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ದ.ಕ.ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸೆ.7ರಂದು ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪುರುಷರಿಗೆ ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋಖೋ, ಫುಟ್ಬಾಲ್, ಥ್ರೋಬಾಲ್, ಯೋಗಾಸನ, ಮಹಿಳೆಯರಿಗೆ ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋಖೋ, ಥ್ರೋಬಾಲ್, ಯೋಗಾಸನ ಸ್ಪರ್ಧೆ ನಡೆಯಲಿದೆ. ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯುಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಹಾಕಿ, ಬಾಸ್ಕೆಟ್ ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹ್ಯಾಂಡ್ ಬಾಲ್, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್ ಕ್ರೀಡೆಗಳನ್ನು ನೇರವಾಗಿ ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಲಾಗುವುದು. ಟೆನ್ನಿಸ್, ನೆಟ್ಬಾಲ್ ಮತ್ತು ಈಜು ಕ್ರೀಡೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಲಾಗುವುದು.
ನೋಂದಾವಣಿ
ಪ್ರಪ್ರಥಮ ಬಾರಿಗೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು/ ನೇರವಾಗಿ ಜಿಲ್ಲಾ ಮಟ್ಟದಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ಭಾಗವಹಿಸುವವರು ವಿವರಗಳನ್ನು ಮೊಬೈಲ್ ಆಪ್/ವೆಬ್ ಪೋರ್ಟಲ್ https://dasaracmcup.2025.etrpindia.com/KA-sports e QR Code ನೊಂದಾವಣೆ ಮಾಡಿಕೊಳ್ಳತಕ್ಕದ್ದು. ವಯೋಮಿತಿ ಮುಕ್ತವಾಗಿದ್ದು ವಯಸ್ಸಿನ ಮಿತಿ ಇರುವುದಿಲ್ಲ. ಭಾಗವಹಿಸುವ ಕ್ರೀಡಾಪಟುಗಳು ಆಯಾ ತಾಲೂಕಿನಲ್ಲಿ ಸ್ಪರ್ಧೆ ನಡೆಯುವ ಸ್ಥಳದಲ್ಲಿ ಪೂರ್ವಾಹ್ನ 8.30 ಗಂಟೆಗೆ ಹಾಜರಿರುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಕಛೇರಿ 0824-2451264 ಅಥವಾ ರಜನಿ (ಅಧೀಕ್ಷಕರು) 8105100781 ಹಾಗೂ ಪುತ್ತೂರು, ಕಡಬ ತಾಲೂಕಿನ ನೋಡಲ್ ಅಧಿಕಾರಿ ಮಾಮಚ್ಚನ್ 8746845280 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.