ಪುತ್ತೂರು: ನೆಹರು ನಗರದಲ್ಲಿರುವ ಸುಧಾನ ರೆಸಿಡೆನ್ಶಿಯಲ್ ಶಾಲೆಯಲ್ಲಿ ನಡೆದ 2025-26ನೇ ಸಾಲಿನ ವಲಯಮಟ್ಟದ 17 ವರ್ಷ ವಯೋಮಾನದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನವನ್ನು ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿವೆ.
ಪ್ರಾಂಶುಪಾಲೆ ಭಗಿನಿ ಅನಿತಾ ಅವರ ಮಾರ್ಗದರ್ಶನದಲ್ಲಿ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹರೀಶ್ ರವರ ತರಬೇತಿ ನೀಡಿರುತ್ತಾರೆ