ನೆಲ್ಯಾಡಿ: ಸರಕಾರಿ ಹಿ.ಪ್ರಾ.ಶಾಲೆ ಹೊಸಮಜಲು ಕೌಕ್ರಾಡಿ ಇಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಎಸ್ಡಿಎಂಸಿ ಅಧ್ಯಕ್ಷ ರಮೇಶ್ ಬಾಣಜಾಲು ಧ್ವಜಾರೋಹಣ ನೆರವೇರಿಸಿದರು.
ವಿದ್ಯಾರ್ಥಿಗಳಿಂದ ದೇಶಭಕ್ತಿಯ ನಾದದೊಂದಿಗೆ ಪಥಸಂಚಲನ ನಡೆಯಿತು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾ.ಪಂ.ಅಧ್ಯಕ್ಷರು, ಸದಸ್ಯರು, ಎಸ್ಡಿಎಂಸಿ ಮಾಜಿ ಅಧ್ಯಕ್ಷರುಗಳು, ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಸದಸ್ಯರು, ಅಂಗನವಾಡಿ ಶಿಕ್ಷಕರು, ಪುಟಾಣಿಗಳು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ರಾಷ್ಟ್ರಪ್ರೇಮದ ನೃತ್ಯ, ನಾಟಕ, ದೇಶಭಕ್ತಿಗೀತೆಗಳ ವೈಭವ ಮೆರೆದರು.