ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಹಾಗೂ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಸಹಭಾಗಿತ್ವದಲ್ಲಿ ‘ಯುವಕ್ರಾಂತಿ ಬೂತ್ ಗೆ ಶಕ್ತಿ’ ಎಂಬ ಕಾರ್ಯಕ್ರಮಕ್ಕೆ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ಅವರು ಈಶ್ವರಮಂಗಲದಲ್ಲಿ ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ, ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಹಾಜಿ ಮೇನಾಲ, ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ, ಪುತ್ತೂರು ನಗರಸಭೆ ಸದಸ್ಯ ಬಶೀರ್ ಪರ್ಲಡ್ಕ, ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಉಸ್ತುವಾರಿ ಇಮ್ತಿಯಾಜ್ ಕಲ್ಲಡ್ಕ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯದರ್ಶಿ ಶಮೀಮ್ ಗಾಳಿಮುಖ, ಅಕ್ಕು ಈಶ್ವರಮಂಗಲ ಹಾಗೂ ಕಾಂಗ್ರೆಸ್ ಮುಖಂಡರು, ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 2025/26ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ವಲಯ ಅಧ್ಯಕ್ಷರಾಗಿ ಸವಾದ್ ಮೇನಾಲ, ಉಪಾಧ್ಯಕ್ಷರಾಗಿ ಪ್ರದೀಪ್, ಕಾರ್ಯದರ್ಶಿಯಾಗಿ ಸಿಯಾಬ್, ಸೋಶಿಯಲ್ ಮೀಡಿಯಾ ವಿಂಗ್ ಆಗಿ ಫವಾಜ್ ಮೇನಾಲ ಅವರನ್ನು ಆಯ್ಕೆ ಮಾಡಲಾಯಿತು.