ಆ.21:ರೋಟರಿ ಪುತ್ತೂರು ಸೆಂಟ್ರಲ್ ನಿಂದ ಉಚಿತ ನೇತ್ರ ತಪಾಸಣೆ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ವತಿಯಿಂದ ಪೆರ್ಲಂಪಾಡಿ ಷಣ್ಮುಖ ದೇವ ಪ್ರೌಢಶಾಲೆ ಇದರ ಸಹಯೋಗದಲ್ಲಿ ಆ.21ರಂದು ಶಾಲಾ ವಿದ್ಯಾರ್ಥಿಗಳಿಗಾಗಿ ಉಚಿತ ಕಣ್ಣಿನ ತಪಾಸಣೆ ಮತ್ತು ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ಜರಗಲಿದೆ.


ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಸ್ಟಾರ್ ಆಪ್ಟಿಕಲ್ಸ್ ಪುತ್ತೂರು ಇವರ ಸಹಕಾರದೊಂದಿಗೆ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಹಿಂದಿನ ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಶ್ಯಾಮ್ ಸುಂದರ್ ರೈ ಮತ್ತು ವಲಯ 5ರ ವಲಯ ಸೇನಾನಿ ಉಮಾನಾಥ ಪಿ ಬಿ, ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಾದ ಶಿವರಾಮ್ ಭಟ್ ಇವರು ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷ ಚಂದ್ರಹಾಸ ರೈ ಬಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here