ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಡೆಸರ್ಟ್ಸ್’ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ

0

ಪುತ್ತೂರು: ಸಂತ ಫಿಲೋಮಿನಾ ಪ. ಪೂ ಕಾಲೇಜು ಹಾಗೂ ವಾಣಿಜ್ಯ ಶಾಸ್ತ್ರ ವಿಭಾಗ ಇದರ ಆಶ್ರಯದಲ್ಲಿ ಆ 20 ರಂದು ಕಾಲೇಜು ಸಭಾಂಗಣದಲ್ಲಿ ‘ಫಿಲೋ ಡೆಸರ್ಟ್ಸ್ ‘ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು.


 ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರಿನ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಲವೀನಾ ಎಲ್ ಸಾಂತುಮೆಯೊರ್
ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸು ಕೇವಲ ಅಂಕ ಗಳಿಕೆಯಲ್ಲಿ ಇರದೆ, ಸರ್ವಾಂಗೀಣ ಅಭಿವೃದ್ಧಿಯ ಯಶಸ್ಸಿನ ಮೂಲ ಗುಟ್ಟು ಆಗಿರುತ್ತದೆ. ವಿದ್ಯಾರ್ಥಿಗಳು ತರಗತಿಯ ಪಾಠದ ಜೊತೆಗೆ, ಹೊರ ಪ್ರಪಂಚದ ಬಗ್ಗೆ ತಿಳುವಳಿಕೆಯನ್ನು ಹೊಂದಬೇಕು. ಮುಖ್ಯವಾಗಿ ವಾಣಿಜ್ಯ ವಿದ್ಯಾರ್ಥಿಗಳಾದ ತಮಗೆ, ತಮ್ಮ ಸುತ್ತಮುತ್ತಲಿನ ಅಷ್ಟೇ ಅಲ್ಲದೆ, ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ವ್ಯವಹಾರಗಳು ಯಾವ ರೀತಿಯಲ್ಲಿ ನಡೆಯುತ್ತವೆ ಎನ್ನುವ ಜ್ಞಾನ ಇರಬೇಕಾಗಿದೆ. ಇಂತಹ ಜ್ಞಾನವನ್ನು ಬೆಳೆಸುವಲ್ಲಿ ಈ ‘ಫಿಲೋ ಡೆಸರ್ಟ್ಸ್’ ಕಾರ್ಯಕ್ರಮ ನಿಮಗೆ ಅಡಿಪಾಯವಾಗಲಿ. ಇಂತಹ ಕಾರ್ಯಕ್ರಮಗಳ ಸಂಪೂರ್ಣ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಹೇಳಿದರು.


 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ವಾಣಿಜ್ಯ ವಿದ್ಯಾರ್ಥಿಗಳಿಗೆ ಈ ‘ಫಿಲೋ ಡೆಸರ್ಟ್ಸ್ ‘ ಒಂದು ಅತ್ಯಂತ ಉಪಯುಕ್ತ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮವನ್ನು ಆಯೋಜಿಸಿದ ಸಂಯೋಜಕರಿಗೆ ಅಭಿನಂದನೆಯನ್ನು  ತಿಳಿಸಿದರು. ಕಾರ್ಯಕ್ರಮದಲ್ಲಿ ಪೂರ್ಣ ಪ್ರಮಾಣದಲ್ಲಿ ಭಾಗವಹಿಸುವ ಮೂಲಕ ಸಂಪೂರ್ಣ ಪ್ರಯೋಜನವನ್ನು ಪಡೆಯಬೇಕೆಂದು ತಿಳಿಸಿದರು.


 ಇದೇ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ತಾವು ತಯಾರಿಸಿದ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಗೋವಿಂದ ಪ್ರಕಾಶ್ ಸಿ. ಎಚ್ ಸ್ವಾಗತಿಸಿ, ಫಿಲೋಮಿನಾ ಮೊಂತೆರೋ ವಂದಿಸಿ, ವಿದ್ಯಾರ್ಥಿ ಸಾಯಿ ನಂದನ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here