ವಿಟ್ಲ: ವಿಟ್ಲ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ರವರ ನೇತೃತ್ವದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಸಿಎಂ ದೇವರಾಜ್ ಅರಸು ರವರ ಜನ್ಮ ದಿನಾಚರಣೆ ಕಾರ್ಯಕ್ರಮವು ವಿಟ್ಲ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ ವಿಟ್ಲ, ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಲ್ ಖಾದರ್ ವಿಟ್ಲ, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ ಕೊಲ್ಯ,ವಿಟ್ಲ ಗ್ರಾ.ಪಂ ಮಾಜಿ ಅಧ್ಯಕ್ಷ ಎಂ ಕೆ ಮುಸಾ, ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನಾಸಿರ್ ಕೋಲ್ಪೆ, ಬ್ಲಾಕ್ ಹಿಂದುಳಿದ ವರ್ಗದ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ,ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಹಸೈನರ್ ನೆಲ್ಲಿಗುಡ್ಡೆ,ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಬ್ದುಲ್ ರಹಿಮಾನ್ ಕುರುಂಬಳ, ಮೆಸ್ಕಾಂ ಉಪವಿಭಾಗ ವಿಟ್ಲ ಸಲಹಾ ಸಮಿತಿ ಸದಸ್ಯ ಕರೀಂ ಕುದ್ದುಪದವು,ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಅಬ್ಬು ನವಗ್ರಾಮ, ಬ್ಲಾಕ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಶಮೀರ್ ಪೆರುವಾಯಿ, ಬ್ಲಾಕ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಶಾಫಿ ಸೂರ್ಯ,ವಲಯ ಅಧ್ಯಕ್ಷರುಗಳಾದ ಕೋಟಿ ಪೂಜಾರಿ, ಆದಂ ಕೇದುವಡ್ಕ, ಜೋನ್ಸನ್ ಶಿಬಾ,ಶೈಕ್ ಅಲಿ ಸೆರಾಜೆ ಸೇರಿದಂತೆ ಪ್ರಮುಖರಾದ ಸದಾಶಿವ ಶೆಟ್ಟಿ ಅಳಿಕೆ,ಅಬ್ಬಾಸ್ ದಾಸರಬೆಟ್ಟು,ಮನೋಹರ್ ಲ್ಯಾನ್ಸಿ, ಅಶೋಕ್ ಎನ್ ಎಸ್ ಡಿ, ರವಿ ಉಕ್ಕುಡ, ಉಮೇಶ, ಸಂತೋಶ್ ಕುಮಾರ್, ಶರೀಫ್, ಹಾರಿಸ್ ಸಿ ಎಚ್, ಷರೀಫ್ ಪೊಲ್ಯ, ಸಾದಿಕ್ ಅಕ್ಕರೆ, ಅಬ್ದುಲ್ ಲತೀಫ್ ದಲ್ಕಾಜೆ, ಚಂದ್ರಶೇಖರ್, ಹಮೀದ್, ಗಿಲ್ಬರ್ಟ್ ವೇಗಸ್ ಮೊದಲಾದವರು ಉಪಸ್ಥಿತರಿದ್ದರು.