ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು : “ಕೈ” ಹಿಡಿದ ಗ್ಯಾರಂಟಿ: ಶಾಸಕ ಅಶೋಕ್ ರೈ

0

ಪುತ್ತೂರು: ಕಬಡ ಪಟ್ಟಣ ಪಂಚಾಯತ್‌ಗೆ ನಡೆದ ಚೊಚ್ಚಲ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದು ಇದು ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯ ಫಲವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪ್ರಬುದ್ಧ ಮತದಾರ ಬಂಧುಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೂ ನೆರವಾಗಿದೆ. ಕಾಂಗ್ರೆಸ್ ಕೇವಲ ಭರವಸೆಯನ್ನು ಮಾತ್ರ ಕೊಟ್ಟು ಜನರಿಗೆ ಎಂದೂ ಮೋಸ ಮಾಡುವುದಿಲ್ಲ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಜನರ ಮನ ಗೆಲ್ಲುವಲ್ಲಿ ಸಫಲವಾಗಿದೆ. ದ ಕ ಜಿಲ್ಲೆ ಸೇರಿದಂತೆ ಎಲ್ಲಾ ಕ್ಷೇತ್ರಗಳ ಅಭಿವೃದ್ದಿಗೆ ಸರಕಾರ ಪಕ್ಷ ಬೇಧ ಮಾಡದೆ ಅನುದಾನವನ್ನು ನೀಡಿದೆ. ಜನ ಈಗ ಬುದ್ದಿವಂತರಾಗಿದ್ದು ಯಾವ ಪಕ್ಷ ಬಡವರ ಪರ, ಯಾವ ಪಕ್ಷ ಅಧಿಕಾರಕ್ಕೆ ಬಂದರೆ ನೆಮ್ಮದಿಯ ಬದುಕು ಕಟ್ಟಲು ಸಾಧ್ಯ ಎಂಬುದನ್ನು ತಿಳಿದುಕೊಂಡಿದ್ದಾರೆ ಇದರ ಪಲಿತಾಂಶವೇ ಕಡಬದ ಜನತೆ ನೀಡಿದ್ದಾರೆ.

13 ರಲ್ಲಿ 8 ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಉಳಿದಂತೆ ಅಲ್ಪ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ. ಮುಂದಿನ ದಿನಗಳಲ್ಲಿ ದ ಕ ಜಿಲ್ಲೆ ಸೇರಿದಂತೆ ಎಲ್ಲಾ ಕಡೆಗಳಲ್ಲಿ ನಡೆಯುವ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದು ಬರಲಿದೆ ಮತ್ತು 2028 ರ ಚುನಾವಣೆಯಲ್ಲೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಡವರ ಪರ ಸರಕಾರ ಇನ್ನಷ್ಟು ಯೋಜನೆಗಳನ್ನು ಮುಂದಿನ ದಿನಗಳಲ್ಲಿ ರೂಪಿಸಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

LEAVE A REPLY

Please enter your comment!
Please enter your name here