ಕಾಣಿಯೂರು: ಬ್ಯಾಂಕ್ ಆಫ್ ಬರೋಡ ಬ್ಯಾಂಕಿನ ಕಾಣಿಯೂರು ಶಾಖಾ ವತಿಯಿಂದ ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಡುಗೆಯಾಗಿ ನೀಡಿದ ಹತ್ತು ಸಾವಿರ ಮೌಲ್ಯದ 23 ಚಯರ್ ಗಳನ್ನು ಆ 20ರಂದು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಬ್ಯಾಂಕಿನ ಮೆನೇಜರ್ ವೆಲ್ಲಮ್ಮಾಲ್, ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ, ಸಿ ಆರ್ ಪಿ ಯಶೋದ, ಶಾಲಾ ಮುಖ್ಯಗುರು ಬಾಲಕೃಷ್ಣ ಕೆ, ಕಾಣಿಯೂರು ಸರಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕ ಹನುಮಂತ್ ಹಾಗೂ ಎಸ್ ಡಿ ಎಂ ಸಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.