ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪ ಉರಿಮಜಲು ಎಂಬಲ್ಲಿ ನಡೆದಿದೆ.
ಉರಿಮಜಲು ನಿವಾಸಿ ಗಣೇಶ್ ಆಚಾರ್ಯ (42 ವ.) ಆತ್ಮಹತ್ಯೆ ಮಾಡಿಕೊಂಡವರು.
ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ರವರು ಆ.20ರಂದು ತನ್ನ ಮನೆ ಸಮೀಪದಲ್ಲಿ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತಿದ್ದಾರೆ.