ಪುತ್ತೂರು:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ನಗರ ವಲಯ ಮಟ್ಟದ 14 ಮತ್ತು 17 ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಟ್ಮಿಂಟನ್ ಪಂದ್ಯಾಟವು ಆ.19ರಂದು ಸಾಮೆತಡ್ಕ ಸುದಾನ ಸ್ಪೋರ್ಟ್ಸ್ ಕ್ಲಬ್ ಇಲ್ಲಿ ನಡೆಯಿತು.
ಉದ್ಘಾಟನಾ ಸಮಾರಂಭವನ್ನು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ನೆರವೇರಿಸಿದರು.

ಅತಿಥಿಗಳಾಗಿ ಸಿ ಆರ್ ಪಿ ಪುತ್ತೂರು ನಗರ ಶಶಿಕಲಾ ಎಸ್, ಪುತ್ತೂರು ವಿಭಾಗ ನೋಡಲ್ ಅಧಿಕಾರಿ ಪ್ರೌಢಶಾಲಾ ನರೇಶ್ ಲೋಬೋ, ಪುತ್ತೂರು ಪ್ರಾಥಮಿಕ ವಿಭಾಗ ನೋಡಲ್ ಅಧಿಕಾರಿ ಕುಸುಮಾವತಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಕುಮಾರ್ ರೈ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಯ್ಯ ಉಪಸ್ಥಿತರಿದ್ದರು.ದೈಹಿಕ ಶಿಕ್ಷಕ ಭಾಸ್ಕರ್ ಗೌಡಎಂ ಸ್ವಾಗತಿಸಿ ,ದೈಹಿಕ ಶಿಕ್ಷಕಿ ಪೂಜಾಶ್ರೀ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ವಾಣಿಶ್ರೀ ಕಾರ್ಯಕ್ರಮ ನಿರ್ವಹಿಸಿದರು.
ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣಯ್ಯ ವಹಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮವನ್ನು ಮುಖ್ಯೋಪಾಧ್ಯಾಯ ಸತೀಶ್ ಕುಮಾರ್ ರೈ ಹಾಗೂ ಪುತ್ತೂರು ಪ್ರೌಢಶಾಲಾ ವಿಭಾಗ ನೋಡಲ್ ಅಧಿಕಾರಿ ನರೇಶ್ ಲೋಬೋ ನೆರವೇರಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಆಶಾಲತಾ ವಂದಿಸಿ,ದೈಹಿಕ ಶಿಕ್ಷಕ ರೀವಣ್ ರಾಜ್ ಸಹಕರಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ವಾಣಿಶ್ರೀ , ದೈಹಿಕ ಶಿಕ್ಷಣ ಶಿಕ್ಷಕಿ ರಶ್ಮಿ ನಿರ್ವಹಿಸಿದರು.