ಪುತ್ತೂರು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ನೇತೃತ್ವದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಸ್ವಾತಂತ್ರ್ಯೋತ್ಸವ ಕವಿಗೋಷ್ಠಿ -2025 ಆ.23ರಂದು ಅಪರಾಹ್ನ 2.30ರಿಂದ ಅಳಿಕೆ ಗ್ರಾಮದ ಎರುಂಬು ಶ್ರೀವಿಷ್ಣುಮಂಗಲ ದೇವಸ್ಥಾನ ವಠಾರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮಕ್ಕಳ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಗೌರವಾಧ್ಯಕ್ಷ ಬಾಲಕೃಷ್ಣ ಕಾರಂತ್ ಎರುಂಬು ವಹಿಸಲಿದ್ದಾರೆ, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಉದ್ಘಾಟಿಸಲಿರುವರು.ಮುಖ್ಯ ಅತಿಥಿಗಳಾಗಿ ಅಳಿಕೆ ಗ್ರಾಮ ಪಂಚಾಯತಿ ಅಧ್ಯಕ್ಷ ಸಣ್ಣಗುತ್ತು ಪದ್ಮನಾಭ ಪೂಜಾರಿ , ಕನ್ನಡ ಸಾಹಿತ್ಯ ಪರಿಷತ್ತು ವಿಟ್ಲ ಹೋಬಳಿ ಘಟಕದ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಬಂಟ್ವಾಳ ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ್ ಬಾಯಾರು, ಪುತ್ತೂರು ಪ್ರಗತಿ ಎಜುಕೇಶನಲ್ ಫೌಂಡೇಶನ್ ಸ್ಥಾಪಕಾಧ್ಯಕ್ಷ ಗೋಕುಲ್ ನಾಥ್ ಪಿ ವಿ, ಮಕ್ಕಳ ಸಾಹಿತ್ಯ ಪರಿಷತ್ತುಬಂಟ್ವಾಳ ತಾಲೂಕು ಘಟಕ ಅಧ್ಯಕ್ಷೆ ಶ್ರೀಕಲಾ ಕಾರಂತ್ ಭಾಗವಹಿಸಲಿದ್ದಾರೆ.
ಸ್ವಾತಂತ್ರ್ಯೋತ್ಸವ ಕವಿಗೋಷ್ಠಿ-2025 ರ ಅಧ್ಯಕ್ಷತೆಯನ್ನು ನಾರ್ಶ ಮೈದಾನ ಸರಕಾರಿ ಪ್ರೌಢ ಶಾಲೆಯ ಮುಖ್ಯಗುರು, ರಾಷ್ಟ್ರೀಯ ತರಬೇತುದಾರ, ಸಂಪನ್ಮೂಲ ವ್ಯಕ್ತಿ ಗೋಪಾಲಕೃಷ್ಣ ನೇರಳಕಟ್ಟೆ ವಹಿಸಲಿದ್ದಾರೆ, ಆಮಂತ್ರಣ ಪರಿವಾರದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ವಿಂಧ್ಯಾ ಎಸ್ ರೈ ಕವಿಗೋಷ್ಠಿ ಗೆ ಚಾಲನೆ ನೀಡಲಿದ್ದಾರೆ.ಸುಮಾರು 50 ಕವಿಗಳು ಭಾಗವಹಿಸಲಿದ್ದಾರೆ ಎಂದು ಚಿಗುರೆಲೆ ಸಾಹಿತ್ಯ ಬಳಗದ ಕಾರ್ಯಕ್ರಮ ಸಂಯೋಜಕ ನಾರಾಯಣ ಕುಂಬ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.