ಪುತ್ತೂರು: ಕಲ್ಲಾರೆಯಲ್ಲಿರುವ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಂತ್ರಾಧೀನ ಮಕ್ಕಳ ರೇಖಾಚಿತ್ರ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮ ಆ.24ರಂದು ನಡೆಯಲಿದೆ.
ಸಂಸ್ಥೆಯ 25ನೇ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದಕ್ಕೆ ಪೂರಕವಾಗಿ ರೇಖಾಚಿತ್ರ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಬೆಳಿಗ್ಗೆ ಗಂಟೆ 10ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದೆ ಎಂದು ಸಂಸ್ಥೆಯ ಸಂಚಾಲಕ ಪ್ರವೀಣ್ ವರ್ಣಕುಟೀರ ಅವರು ತಿಳಿಸಿದ್ದಾರೆ.