ಕಬಡ್ಡಿ ಪಂದ್ಯಾಟ, ಅಟ್ಟಿ ಮಡಿಕೆ ಒಡೆಯುವ ಸಾಹಸ, ಮುದ್ದುಕೃಷ್ಣ ಸ್ಪರ್ಧೆ, ಹಗ್ಗಜಗ್ಗಾಟ ಪಂದ್ಯಾಟ ಜೊತೆ ಮೇಳೈಸಲಿದೆ ಸನಾತನ ರಾಷ್ಟ್ರಾಂಜಲಿ
ಪುತ್ತೂರು: ಶಿವಾಜಿ ಯುವಕ ಮಂಡಲ (ರಿ.) ನೆಹರು ನಗರ ಕಲ್ಲೇಗ ಇವರ ಆಶ್ರಯದಲ್ಲಿ 50ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕಲ್ಲೇಗ ಮೊಸರು ಕುಡಿಕೆ-2025 ಆ.23,24ರಂದು ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ನಡೆಯಲಿದೆ.
ಆ.23 ರಂದು ಬೆಳಿಗ್ಗೆ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಕಶೆಕೋಡಿ ಆಡಳಿತ ಮೊಕ್ತೇಸರ ಸಂಜೀವ ನಾಯಕ್ ಕಲ್ಲೇಗ ಉದ್ಘಾಟಿಸಲಿದ್ದಾರೆ. ನಗರಸಭಾ ಸದಸ್ಯ ವಸಂತ ಕಾರೆಕ್ಕಾಡ್ ಕಾಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲ್ಲೇಗ ಕಲ್ಕುಡ-ಕಲ್ಲುರ್ಟಿ ದೈವಸ್ಥಾನದ ಅಧ್ಯಕ್ಷರಾದ ಅಜಿತ್ ಕುಮಾರ್ , ಕಲ್ಲೇಗ ಕಲ್ಕುಡ-ಕಲ್ಲುರ್ಟಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಶಾಂತ್ ಮುರ ಭಾಗವಹಿಸಲಿದ್ದಾರೆ.
ಮಧ್ಯಾಹ್ನ ಮ್ಯಾಟ್ ಅಂಕಣದ ಪುರುಷರ ಕಬಡ್ಡಿ ಪಂದ್ಯಾಟ ಉದ್ಘಾಟನೆಗೊಳ್ಳಲಿದೆ. ಪದ್ಮಶ್ರೀ ಸೋಲಾರ್ ನ ಸೀತಾರಾಮ ರೈ ಕೆದಂಬಾಡಿಗುತ್ತು, ಪರಿವಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಹರೀಶ್ ನಾೖಕ್, ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರಾದ ಶಿವಕುಮಾರ್ ಕಲ್ಲಿಮಾರ್, ವಿನಾಯಕ ಟ್ರೇಡರ್ಸ್ ನ ನವೀನ್ ಶೆಟ್ಟಿ, ಸಮೃದ್ಧಿ ಕನ್ಸ್ಟ್ರಕ್ಷನ್ ನ ಸುಧೀರ್ ಪ್ರಸಾದ್ ಎ ಚಾಲನೆ ನೀಡಲಿದ್ದಾರೆ.
ಸಂಜೆ 5ರಿಂದ ವಿವೇಕಾನಂದ ಕಾಲೇಜಿನ ಮುಂಭಾಗದಿಂದ ಅಟ್ಟಿ ಮಡಿಕೆ ಒಡೆಯುವ ಸಾಹಸ ಸ್ಪರ್ಧೆ ಪ್ರಾರಂಭಗೊಳ್ಳಲಿದೆ. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ರವೀಂದ್ರ ಪಿ, ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ, ಮಣ್ಣಿಪ್ಪಾಡಿ ಕನ್ಸ್ಟ್ರಕ್ಷನ್ ನ ಕೃಷ್ಣ ಮಣ್ಣಿಪ್ಪಾಡಿ, ಅಶ್ವಿನಿ ಫಾರ್ಮ್ಸ್ ನ ಕೆ ರಾಜಾರಾಮ್ ಪ್ರಭು, ಟೀಮ್ ವರ್ಕ್ ಡೆವಲಪರ್ಸ್ ನ ರಂಜಿತ್ ಬಂಗೇರ, ಧಾರ್ಮಿಕ ಮುಖಂಡರಾದ ಮುರಳಿಕೃಷ್ಣ ಹಸಂತಡ್ಕ ಚಾಲನೆ ನೀಡಲಿದ್ದಾರೆ.
ಸಂಜೆ 7ರಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಷ್ಟ್ರದೇವೋ ಭವ ಖ್ಯಾತಿಯ ಮಂಗಳೂರಿನ ಸನಾತನ ನಾಟ್ಯಾ ಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ನೃತ್ಯ ನಿರ್ದೇಶನದ ರಾಷ್ಟ್ರ ಮತ್ತು ಧರ್ಮ ಜಾಗೃತಿಯ ನೃತ್ಯ ವೈವಿಧ್ಯ ಸನಾತನ ರಾಷ್ಟ್ರಾಂಜಲಿ ಮೂಡಿಬರಲಿದೆ.
ಆ.24ರಂದು ಬೆಳಿಗ್ಗೆ 10ರಿಂದ 6 ವರ್ಷದೊಳಗಿನ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ ನಡೆಯಲಿದೆ. ನಗರ ಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್, ಮಾಜಿ ಶಾಸಕ ಸಂಜೀವ ಮಠಂದೂರು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಕೋಡಿಂಬಾಡಿ ಕೃಷ್ಣ ಕೃಪಾ ಇಂಡಸ್ಟ್ರೀಸ್ ನ ಭವಿನ್ ಶೇಟ್, ಕುಮ್ ಕುಮ್ ಅಸೋಸಿಯೇಟ್ಸ್ ನ ಸಂತೋಷ್ ಕುಮಾರ್ ರೈ ನಳೀಲು, ಬಿಜೆಪಿ ಜಿಲ್ಲಾ ಪ್ರಕೋಷ್ಟಗಳ ಸಹ ಸಂಯೋಜಕರಾದ ಪ್ರಸನ್ನ ದರ್ಬೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮಹಿಳೆಯರಿಗೆ, ಪುರುಷರಿಗೆ, ಬಾಲಕ, ಬಾಲಕಿಯರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ.
ಸಂಜೆ 5ರಿಂದ 7 ಜನರ 550ಕೆ.ಜಿ ತೂಕದ ಇಂಟರ್ ಲಾಕ್ ಅಂಗಣದ ಹಗ್ಗಜಗ್ಗಾಟ ಪಂದ್ಯಾಟ ನಡೆಯಲಿದೆ. ಪ್ರವೀಣ್ ಶೆಟ್ಟಿ ಅಳಕೆಮಜಲು, ನಗರಸಭೆ ಪೌರಾಯುಕ್ತರಾಗಿದ್ದ ಮಧು ಎಸ್. ಮನೋಹರ್, ಪುತ್ತೂರು ನಗರ ಪೊಲೀಸ್ ಠಾಣೆ ಉಪನಿರೀಕ್ಷರಾದ ಆಂಜನೇಯ ರೆಡ್ಡಿ ಜಿ.ವಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ರಾತ್ರಿ 8ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ನಗರಸಭಾ ಸದಸ್ಯ ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದರಾದ ಬ್ರಿಜೇಶ್ ಚೌಟ, ಶಾಸಕರಾದ ಅಶೋಕ್ ಕುಮಾರ್ ರೈ, ನಗರಸಭೆ ಉಪಾಧ್ಯಕ್ಷರಾದ ಬಾಲಚಂದ್ರ ರಾವ್, ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ವಿಜಯ್ ಸಾಮ್ರಾಟ್ ಸ್ಥಾಪಕಾಧ್ಯಕ್ಷರಾದ ಸಹಜ್ ರೈ ಬಳಜ್ಜ, ತ್ರಿನೇತ್ರದತ್ತ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರು, ಪುತ್ತೂರು ಪ್ರಾಪರ್ಟಿಸ್ ನ ನಿತಿನ್ ಪಕ್ಕಳ ಆಗಮಿಸಲಿದ್ದಾರೆ.