ವಿಟ್ಲ: ದೀನ್ ದಯಾಳ್ ಅಂತ್ಯೋದಯ ಯೋಜನೆ, ಅಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಮಾಣಿ ಗ್ರಾಮ ಪಂಚಾಯತ್, ಮಾಣಿಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮಾಣಿ ಇವುಗಳ ಜಂಟಿ ಆಶ್ರಯದಲ್ಲಿ ಪರಿವರ್ತನೆ -ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವು ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂಸ್ಥೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಗೌಡ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಪರಿವರ್ತನೆ ಅಭಿಯಾನದ ಉದ್ದೇಶ ಹಾಗೂ ಅಭಿಯಾನದ ಮೂಲಕ ಕೈಗೊಳ್ಳಬೇಕಾದ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟಿಸ್ ರವರು ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಮಾಹಿತಿ ನೀಡಿ, ಮಕ್ಕಳು ಮತ್ತು ಯುವಕರು ವ್ಯಸನಕ್ಕೆ ಬಲಿಯಾಗುತ್ತಿದ್ದು ಪೋಷಕರು ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು. ಸಂಜೀವಿನಿ ತಾಲೂಕು ವ್ಯವಸ್ಥಾಪಕ ಪ್ರದೀಪ್ ಕಾಮತ್ ರವರು ಮಾದಕ ವ್ಯಸನ ಮುಕ್ತ ಕರ್ನಾಟಕ ಇದರ ಪ್ರಮಾಣ ವಚನ ಭೋದಿಸಿದರು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಣಿ ಒಕ್ಕೂಟದ ಅಧ್ಯಕ್ಷೆ ವಿಜಯರವರು ವಹಿಸಿದ್ದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ, ಪಂಚಾಯತ್ ಸದಸ್ಯರಾದ ಇಬ್ರಾಹಿಂ.ಕೆ.ಮಾಣಿ, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಕಾರ್ಯಾನಿರ್ವಹಣಾಧಿಕಾರಿ ಜ್ಯೋತಿರಾಜ್, ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ ಇದರ ಪ್ರತಿನಿಧಿ ಜೀವನ್ ಕೊಲ್ಯರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾಣಿಕ್ಯ ಸಂಜೀವಿನಿ ಒಕ್ಕೂಟದ ಪ್ರತಿನಿಧಿ ಸ್ವಾತಿ, ಕೃಷಿ ಸಖಿ ಕವಿತಾ, ಪಶುಸಖಿ ಚೈತ್ರ ಹಾಗೂ ಬರಿಮಾರು, ಪೆರಾಜೆ,ನೆಟ್ಲಮೂಡ್ನೂರು ಒಕ್ಕೂಟದ ಪ್ರತಿನಿಧಿಗಳು ಹಾಗೂ ಕೃಷಿ ಸಖಿ, ಪಶುಸಖಿಯವರು ಉಪಸ್ಥಿತರಿದ್ದರು. ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ ಲೈಲಾಬಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.