ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಅಂಬಿಕಾ ಪದವಿಪೂರ್ವ ಕಾಲೇಜು ನೆಲ್ಲಿಕಟ್ಟೆ ಇದರ ಸಹಯೋಗದೊಂದಿಗೆ ಆಫೀಸರ್ ಕ್ಲಬ್ ದರ್ಬೆ ಇಲ್ಲಿ ನಡೆದ ತಾಲೂಕುಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ನೇಹಶ್ರೀ ಎ, ಪುಲಕಿತ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಮನ್ವಿತಾ ಭಾಗವಹಿಸಿದ್ದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ. ಎಸ್, ಡಾ. ಜ್ಯೋತಿ ಕುಮಾರಿ, ಪವನ್ ಕುಮಾರ್ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
Home ಇತ್ತೀಚಿನ ಸುದ್ದಿಗಳು ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ...