ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಆ. 24 ರಂದು ಬೆಳಿಗ್ಗೆ ಗಂಟೆಗೆ 9.30 ರಿಂದ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಪ್ರತಿವರ್ಷದಂತೆ ಈ ವರ್ಷ ಕೂಡ ಸಂಘದ ಕಾರ್ಯವ್ಯಾಪ್ತಿಯ ಸದಸ್ಯರ ಮಕ್ಕಳಿಗೆ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಶೇಕಡಾ 90% ಕ್ಕಿಂತ ಹೆಚ್ಚು ಮತ್ತು ಡಿಗ್ರಿಯಲ್ಲಿ ಶೇಕಡಾ 80% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಧನದೊಂದಿಗೆ ಪುರಸ್ಕರಿಸಲಾಗುವುದು ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿರವರು ತಿಳೀಸಿದ್ದಾರೆ.