ಬಡಗನ್ನೂರು: ಪುತ್ತೂರು ದ್ವಾರಕಾ ಪ್ರತಿಷ್ಠಾನ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳು, ಇಲ್ಲಿ ಶ್ರೀಕೃಷ್ಣ ಲೀಲೆ 2025 ರ ಅಭಿನಂನಂದನಾ ಕಾರ್ಯಕ್ರಮ ಆ.22ರಂದು ಶಾಲಾ ಆವರಣದಲ್ಲಿ ನಡೆಯಿತು.
ಆ.16 ರಂದು ವಿಜೃಂಭಣೆಯಿಂದ ನಡೆದ ಶ್ರೀಕೃಷ್ಣ ಲೀಲೆ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಈ ಸಭೆಯಲ್ಲಿ ಕೃತಜ್ಞತೆಯನ್ನು ಸಲ್ಲಿಸಲಾಯಿತು. ಎಸ್ ಕೆ ಫ್ರೆಂಡ್ಸ್ ಮುಡಿಪಿನಡ್ಕ, ಶ್ರೀಕೃಷ್ಣ ಯುವಕಮಂಡಲ ಪಟ್ಟೆ, ಶ್ರೀಕೃಷ್ಣ ಹಿರಿಯ ವಿದ್ಯಾರ್ಥಿ ಸಂಘ ಪಟ್ಟೆ, ಶ್ರೀಕೃಷ್ಣ ಭಜನಾ ಮಂಡಳಿ ಮುಡಿಪಿನಡ್ಕ, ಅಯ್ಯಪ್ಪ ಭಜನಾ ಮಂಡಳಿ ಪೆರಿಗೇರಿ ಹಾಗೂ ನವಚೈತನ್ಯ ಯುವಕಮಂಡಲ ಪೆರಿಗೇರಿ ಇದರ ಪದಾದಿಕಾರಿಗಳು ಹಾಗೂ ಸದಸ್ಯರು ಸಭೆಯಲ್ಲಿ ಭಾಗವಹಿಸಿದರು.
ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಮಾತನಾಡಿ, ಶಾಲೆಯ ಮೇಲೆ ಅಭಿಮಾನವಿಟ್ಟು ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟ ಎಲ್ಲಾ ಸಂಘದ ಪದಾಧಿಕಾರಿಗಳು, ಸ್ವಯಂಸೇವಕರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಮತ್ತು ಸಮಾಜ ಬಾಂಧವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಪರವಾಗಿ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಸಂಸ್ಥೆಯ ಸಂಚಾಲಕವಿಘ್ನೇಶ್ ಹಿರಣ್ಯ ಸ್ವಾಗತಿಸಿ, ಮುಖ್ಯಗುರು ಸುಮನಾ ಬಿ ವಂದಿಸಿದರು. ಪೋಷಕ ವಿದ್ಯಾ ಸಂಸ್ಥೆಗಳ ಪೋಷಕ ಮಂಡಳಿಯ ಅಧ್ಯಕ್ಷರುಗಳಾದ ಲಿಂಗಪ್ಪ ಗೌಡ ಮೂಡಿಕೆ, ಕೇಶವ ಪ್ರಸಾದ್ ನೀಲಗಿರಿ, ಸತೀಶ್ ಕೊಪ್ಪಳ, ನಿವೃತ್ತ ಯೋಧ ಸುಬ್ಬಪ್ಪ ಪಾಟಾಳಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನೂಪ್, ಮುಖ್ಯಗುರು ರಾಜಗೋಪಾಲ ಎನ್, ಶಾಲಾ ಶಿಕ್ಷಕವೃಂದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.