ಪುತ್ತೂರು: ಬೆಂಗಳೂರಿನ ಗಾಂಧೀಭವನದಲ್ಲಿ ಆ.20ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ರಾಜ್ಯ ಸಂಘದ ರಾಜ್ಯ ಪದಾಧಿಕಾಗಳಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಪತ್ರಕರ್ತರ ಸಂಘದ ಎಲ್ಲಾ ಜಿಲ್ಲೆಗಳ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ, ಪತ್ರಕರ್ತರ ರಾಜ್ಯ ಸಂಘವನ್ನು ಅಭಿವೃದ್ದಿಯ ಪಥದತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿಯಾಗಿರುವ ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಎಂ.ವಾಸುದೇವ ಹೊಳ್ಳ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಚ್. ಬಿ. ಮದನಗೌಡ, ಧಾರವಾಡ ಜಿಲ್ಲಾಸಂಘದ ಅಧ್ಯಕ್ಷ ಲೋಚನೇಶ ಹೂಗಾರ್ ಉಪಸ್ಥಿತರಿದ್ದರು.