ಮರ್ದಾಳ ಸೈಂಟ್‌ ಮೇರಿಸ್‌ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ದಿನಾಚರಣೆ

0

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ ಕಡಬ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ಇವುಗಳ ಆಶ್ರಯದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಆ. 23 ರಂದು ಮರ್ದಾಳ ಸೈಂಟ್‌ ಮೇರಿಸ್‌ ಪ್ರೌಢಶಾಲೆಯಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಮರ್ದಾಳ ಸೈಂಟ್‌ ಮೇರಿಸ್‌ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಈಶೋ ಫಿಲೀಫ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳು ಗುಟ್ಕಾ ಇನ್ನಿತರ ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಜೀವನ ನಡೆಸುವುದರ ಜೊತೆಗೆ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು. ಆಗ ಮಾತ್ರ ನಾವು ಕಲಿತ ಶಿಕ್ಷಣಕ್ಕೆ ಅರ್ಥ ಸಿಗುತ್ತದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿರುವ ಕಡಬ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ, ನ್ಯಾಯವಾದಿ ಮಹೇಶ್‌ ಕೆ ಸವಣೂರು ಮಾತನಾಡಿ, ವಿದ್ಯಾರ್ಥಿಗಳು ಡ್ರಗ್ಸ್‌ ಇನ್ನಿತರ ದುಶ್ಚಟಗಳಿಗೆ ಬಲಿಯಾಗದೇ ತಮ್ಮ ವ್ಯಾಸಂಗಕ್ಕೆ ಒತ್ತು ನೀಡುವುದರ ಜೊತೆಗೆ ಪೋಷಕರು ಕಂಡ ಕನಸನ್ನು ನನಸು ಮಾಡುವ ಪ್ರಯತ್ನ ಮಾಡಬೇಕು. ಜೀವನದಲ್ಲಿ ಬರುವ ಕಷ್ಟ ಸುಖಗಳನ್ನು ದಿಟ್ಟ ಮನೋಧರ್ಮ ಬೆಳೆಸುವುದರ ಜೊತೆಗೆ ಸಮಾಜದ ಅಭಿವೃದ್ಧಿಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು. ತಮ್ಮನ್ನು ಸಾಕಿ ಸಲುಹಿದ ಪೋಷಕರನ್ನು ತಮ್ಮ ಇಳಿ ವಯಸ್ಸಿನಲ್ಲಿ ಪ್ರೀತಿಯಿಂದ ಸಾಕಿ ಸಲುಹಿಕೊಂಡು ಬಂದರೆ ಅದು ಮುಂದಿನ ಯುವ ಜನಾಂಗಕ್ಕೆ ಪ್ರೇರಣೆ ಸಿಗುತ್ತದೆ. ಅಂತಹದ ಕೆಲಸವನ್ನು ಭವಿಷ್ಯದಲ್ಲಿ ವಿದ್ಯಾರ್ಥಿಗಳು ಮಾಡಿಕೊಂಡಾಗ ಖಾವಂದರು ಕಂಡ ಸ್ವಾಸ್ಥ್ಯ ಸಂಕಲ್ಪದ ಕಾರ್ಯಕ್ರಮಕ್ಕೆ ಅರ್ಥ ಸಿಗುತ್ತದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸಂತೋಷ್‌ ಕೆ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ದುಶ್ಚಟಕ್ಕೆ ಬಲಿಯಾಗದೇ ನೆಮ್ಮದಿಯ ಜೀವನ ನಡೆಸಬೇಕು ಎಂದರು. ವೇದಿಕೆಯಲ್ಲಿ ಸೇವಾಪ್ರತಿನಿಧಿಗಳಾದ ಜ್ಞಾನ ಸೆಲ್ವಿ, ದಿನೇಶ್ ವೇದಿಕೆಯ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಪಿಲೋಮಿನ ಸ್ವಾಗತಿಸಿ ಸೇವಾಪ್ರತಿನಿಧಿ ವಿನೋದ್‌ ಕೆ ಸಿ ವಂದಿಸಿದರು.ಶಾಲಾ ಶಿಕ್ಷಕಿ ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here