ಪುತ್ತೂರು: ಹೆಚ್ ಪಿಆರ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನೆರವೇರಿತು.
ಅತಿಥಿಯಾಗಿ ಪ್ರಗತಿ ಪ್ಯಾರಾಮೆಡಿಕಲ್ ಕಾಲೇಜಿನ ಉಪಪ್ರಾಂಶುಪಾಲೆಯಾದ ಚೈತ್ರ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಸ್ಪಷ್ಟಗುರಿಯೆಡೆಗೆ ಶಿಸ್ತಿನಿಂದ ಸಾಗಿದರೆ ಉತ್ತುಂಗ ಸ್ಥಾನಕ್ಕೆ ಏರಬಹುದು ಮತ್ತು ಗುರುಹಿರಿಯರಿಗೆ ಗೌರವ ಕೊಡುವ ಮೂಲಕ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡುವುದರ ಮೂಲಕ ಶುಭಹಾರೈಸಿದರು.
ಸಂಸ್ಥೆಯ ಪ್ರಾಂಶುಪಾಲೆಯಾದ ಇವ್ನೀಸ್ ಡಿಸೋಜಾ, ಉಪನ್ಯಾಸಕಿಯರಾದ ಜಲಜ ಎಸ್.ಎ ಮತ್ತು ಮಿರ್ಶಾನ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಉಪನ್ಯಾಸಕರಾದ ರೇಣುಕಾಕೆ, ಶಾರುನ್ ಮತ್ತು ರೇಣುಕಾಜಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ತಮ್ಮ ವಿದ್ಯಾರ್ಥಿ ಜೀವನದ ಬಗ್ಗೆ ಅಭಿಪ್ರಾಯ ಹಂಚಿಕೊಂಡರು.
ಹಿರಿಯ ವಿದ್ಯಾರ್ಥಿಗಳಿಗೆ ಕಿರಿಯ ವಿದ್ಯಾರ್ಥಿಗಳು ಹಲವಾರು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ವಿತರಿಸಲಾಯಿತು. ವಿದ್ಯಾರ್ಥಿನಿಯರಾದ ಸೈಮಾ ಸ್ವಾಗತಿಸಿ, ಅಶ್ರತ್ ವಂದಿಸಿದರು. ಹಾಗೂ ರೂಪಶ್ರೀ ಕಾರ್ಯಕ್ರಮ ನಿರೂಪಿಸಿದರು.