ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜು ಕಾವಳಪಡೂರು ವಗ್ಗ ಇಲ್ಲಿನ ಪ್ರೌಢಶಾಲಾ ವಿಭಾಗದಲ್ಲಿ ಇಕೋ ಕ್ಲಬ್ ನ ಅಂಗವಾಗಿ, ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಇದರ ವತಿಯಿಂದ ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್ ಯೋಜನೆಗಳಡಿಯಲ್ಲಿ ಮಾಹಿತಿ, ಶಿಕ್ಷಣ ಹಾಗೂ ಸಂವಹನ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಕ್ರಮಗಳ ಸಹಭಾಗಿತ್ವದೊಂದಿಗೆ ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಮತ್ತು ನೀರಿನ ಸಂರಕ್ಷಣೆಗೆ ಸಂಬಂಧಿಸಿದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಜಲಜೀವನ್ ಮಿಷನ್ ಸಮನ್ವಯಾಧಿಕಾರಿಗಳಾದ ಧರ್ಮಶ್ರೀ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿಯನ್ನು ನೀಡಿದರು. ಶಾಲಾ ಮುಖ್ಯ ಶಿಕ್ಷಕರಾದ ಶೇಖ್ ಆದಂ ಸಾಹೇಬ್ ನೆಲ್ಯಾಡಿ ಸ್ವಾಗತಿಸಿದರು.ಇಕೋ ಕ್ಲಬ್ ನೋಡಲ್ ಶಿಕ್ಷಕಿ ಅಮೃತವಲ್ಲಿ ಧನ್ಯವಾದ ಸಲ್ಲಿಸಿದರು. ಶಾಲಾ ಸಹ ಶಿಕ್ಷಕ ವೃಂದದವರು ಉಪಸ್ಥಿತರಿದ್ದು, ಸಹಕರಿಸಿದರು.