ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಸ್ಕೌಟ್ಸ್-ಗೈಡ್ಸ್ ಉದ್ಘಾಟನೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಉದ್ಘಾಟನಾ ಸಮಾರಂಭ ಆ.19ರಂದು ನಡೆಯಿತು.


ಮುಖ್ಯ ಅತಿಥಿಯಾಗಿದ್ದ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಭರತ್ ರಾಜ್ ಕೆ. ಅವರು ವಿದ್ಯಾರ್ಥಿಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಮಹತ್ವ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಲಯದ ಕಾರ್ಯದರ್ಶಿ, ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷರೂ ಆದ ಕೆ.ಸೇಸಪ್ಪ ರೈಯವರು, ಶಿಸ್ತು, ಸೇವಾ ಮನೋಭಾವ ಹಾಗೂ ನಾಯಕತ್ವ ಗುಣಗಳ ಮಹತ್ವದ ಬಗ್ಗೆ ತಿಳಿಸಿದರು.


ಸ್ಥಳೀಯ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಪ್ರೇಮಾ ಮಾತನಾಡಿ, ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸುವ ಅಗತ್ಯವನ್ನು ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ಬಂಧಿತ ಪ್ರತಿಜ್ಞೆ, ಗೀತೆ ಹಾಗೂ ಶಿಸ್ತು ಪೂರ್ಣ ಪ್ರದರ್ಶನಗಳನ್ನು ನೀಡಿದರು. ಶಿಕ್ಷಕಿ ಅನುಶ್ರೀ ನಿರೂಪಿಸಿದರು. ಶಿಕ್ಷಕಿ ಗೀತಾ ಕೆ.ಸ್ವಾಗತಿಸಿ, ಶಿಕ್ಷಕಿ ಪ್ರತೀಕ್ಷಾ ಆಳ್ವ ವಂದಿಸಿದರು.

LEAVE A REPLY

Please enter your comment!
Please enter your name here