ಪುತ್ತೂರು: ಇಂಡಿಯನ್ ಸ್ಕೂಲಿನಲ್ಲಿ S.S.L.C ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಆ.23ರಂದು ಶಾಲಾ ಅಡಿಟೋರಿಯಂನಲ್ಲಿ ನಡೆಯಿತು. ಇಂಡಿಯನ್ ಸ್ಕೂಲ್ ಅಧ್ಯಕ್ಷ ಯೂಸುಫ್ ಹಾಜಿ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಪ್ರಾಂಶುಪಾಲೆ ಸಂಶಾದ್ ಬೇಗಂ ಸ್ವಾಗತಿಸಿ, ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ಸಹಕಾರ ಹಾಗೂ ಶಿಕ್ಷಕರ ನಿಷ್ಠೆಯಿಂದಲೇ ಈ ಸಾಧನೆ ಸಾಧ್ಯವಾಯಿತು ಎಂದರು.
ಕಮಿಟಿ ಸದಸ್ಯ ಹಾರೂನ್ ಅಗ್ನಾಡಿ ಮಾತನಾಡಿ, ನಮ್ಮ ಶಾಲೆ ನೂರು ಶೇಕಡ ಫಲಿತಾಂಶ ಬರುತ್ತಿರುವುದಕ್ಕೆ ಹರ್ಷವಿದೆ. ಶ್ರಮ, ಸಮಯ ಮತ್ತು ಶಿಸ್ತು ಜೀವನದಲ್ಲಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಶಾಲಾ ಅಧ್ಯಕ್ಷ ಯೂಸುಫ್ ಹಾಜಿ ಮಾತನಾಡಿ,ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಇನ್ನೂ ಉನ್ನತ ಶಿಕ್ಷಣವನ್ನು ಪಡೆದು ಸಮಾಜಕ್ಕೆ ಮಾದರಿಯಾಗಬೇಕೆಂದರು.
ಶಾಲೆಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನಿಯಾದ ವಿದ್ಯಾರ್ಥಿಗಳಿಗೆ ಪೋಷಕರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಉಳಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ತಾಹಿರ ವಂದಿಸಿದರು. ಶಿಕ್ಷಕ ಹರೀಶ್ ಕಾರ್ಯಕ್ರಮ ನಿರೂಪಿಸಿದರು.