ಕಡಬದಲ್ಲಿ ವಿ.ಹಿಂ.ಪ. ವತಿಯಿಂದ ಮೊಸರುಕುಡಿಕೆ ಉತ್ಸವಕ್ಕೆ ಚಾಲನೆ

0

ಕಡಬ: ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ ಕಡಬ ಪ್ರಖಂಡ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ, ದುರ್ಗಾ ವಾಹಿನಿ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ಆ.24 ರಂದು ನಡೆಯಿತು.

ಕಾರ್ಯಕ್ರಮವನ್ನು ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಕರ್ಕೇರಾ ಉದ್ಘಾಟಿಸಿದರು.

ಶ್ರೀಕಂಠ ಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಹಳ್ಳಿ, ಉದ್ಯಮಿ ಶ್ರೀಧರ ಮಣಿಯಾಣಿ, ವಿ.ಹಿಂ.ಪ. ಕಡಬ ಪ್ರಖಂಡದ ಅಧ್ಯಕ್ಷ ಶಿವರಾಮ ಶೆಟ್ಟಿ ಕೇಪು, ಪೂರ್ವಾಧ್ಯಕ್ಷ ರಾಧಾಕೃಷ್ಣ ಕೋಲ್ಪೆ ಪ್ರಖಂಡದ ಕಾರ್ಯದರ್ಶಿ ಪ್ರಮೀಳಾಲೋಕೇಶ್ ಉಪಸ್ಥಿತರಿದ್ದರು. ಬಳಿಕ ಮಾತೃಶಕ್ತಿ ಮತ್ತು ದುರ್ಗಾ ವಾಹಿನಿ ತಂಡಗಳಿಂದ ಭಜನಾ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳು ನಡೆಯಿತು. ಮಧ್ಯಾಹ್ನ ಕಡಬ ಪೇಟೆಯಲ್ಲಿ ಅಟ್ಟಿ ಮಡಕೆ ಒಡೆಯುವ ಸಾಹಸ ಪ್ರದರ್ಶನದೊಂದಿಗೆ ಭವ್ಯ ಶೋಭಾಯಾತ್ರೆ ನಡೆಯಿತು. ಶೋಭಾಯಾತ್ರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಡಾ. ರಘು ಬೆಳ್ಳಿಪ್ಪಾಡಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಕೃಷ್ಣ ಶೆಟ್ಟಿ, ಪ್ರಮೋದ್ ರೈ ನಂದುಗುರಿ ಕಡಬ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here