ಕಾಣಿಯೂರು: ಗಂಗೂಬಾಯಿ ಹಾನಗಲ್ ಯೂನಿವರ್ಸಿಟಿ ನಡೆಸಿದ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ನೆಲ್ಲಿಕಟ್ಟೆ ಅಂಬಿಕಾ ಮಹಾವಿದ್ಯಾಲಯ ವಿದ್ಯಾರ್ಥಿನಿ, ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿಯಾಗಿರುವ ರಾಶಿ ಕೆ.ಸಿ ಅವರು ಶೇಕಡಾ 95 ಪಡೆದುಕೊಂಡು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ.
ವಿದ್ವಾನ್ ಗೋಪಾಲಕೃಷ್ಣ ಕೆ ವೀರಮಂಗಲ ಅವರ ಶಿಷ್ಯೆಯಾಗಿರುವ ಕಾಣಿಯೂರು ರಾಶಿ ಕಾಂಪ್ಲೆಕ್ಸ್ ಮಾಲಕರಾದ ಚಂದ್ರಶೇಖರ ಬರೆಪ್ಪಾಡಿ ಮತ್ತು ಜ್ಞಾನೇಶ್ವರಿ ಅವರ ಪುತ್ರಿ. ಇವರು ಕಳೆದ ವರ್ಷವು ಗಂಗೂಬಾಯಿ ಹಾನಗಲ್ ಯೂನಿವರ್ಸಿಟಿ ನಡೆಸಿದ ಸಂಗೀತ ಜ್ಯೂನಿಯರ್ ಪರೀಕ್ಷೆಯಲ್ಲಿಯೂ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದರು.