ಆ.27-29: ಕುಂಬ್ರ ಶ್ರೀ ರಾಮ ಭಜನಾ ಮಂದಿರದಲ್ಲಿ 44ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ

0

ಪುತ್ತೂರು: ಒಳಮೊಗ್ರು ಗ್ರಾಮದ ಕುಂಬ್ರ ಶ್ರೀ ರಾಮ ಭಜನಾ ಮಂದಿರದಲ್ಲಿ 44 ನೇ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.27ರಿಂದ ಆರಂಭಗೊಂಡು ಆ.29ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಲಿದೆ. ಆ.27 ರಂದು ಬೆಳಿಗ್ಗೆ ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದೆ ಬಳಿಕ ಶ್ರೀ ಗಣಪತಿ ಹೋಮ ನಡೆಯಲಿದೆ. ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಮಹಿಳೆಯರಿಗೆ ರಂಗೋಲಿ, ಹೂ ಕಟ್ಟುವ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಧಾರ್ಮಿಕ ರಸಪ್ರಶ್ನೆ ನಡೆಯಲಿದೆ. ರಾತ್ರಿ ಭಜನೆ, ಸ್ಥಳೀಯ ಮಕ್ಕಳಿಂದ ಕುಣಿತ ಭಜನೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.


ಆ.28ರಂದು ಬೆಳಿಗ್ಗೆ ಗಣಪತಿ ಹೋಮ, ವಾಗ್ದೇವಿ ಸಂಗೀತ ಶಾಲೆಯ ಗುರುಗಳಾದ ಸವಿತಾ ಪುತ್ತೂರು ಇವರ ಶಿಷ್ಯರಿಂದ ಶಾಸ್ತ್ರೀಯ ಸಂಗೀತ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಭಜನೆ, ಸಾರ್ವಜನಿಕ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಯಕ್ಷಗಾನ ಶ್ರೀ ಕೃಷ್ಣ ಯಕ್ಷಗಾನ ಕಲಾ ಸಂಘ ಕೌಡಿಚ್ಚಾರು ಇದರ ಬಾಲ ಪ್ರತಿಭೆಗಳಿಂದ ‘ ಯಕ್ಷಗಾನ ಬಯಲಾಟ-ಚಕ್ರವರ್ತಿ ದಿಲೀಪ’ ನಡೆಯಲಿದೆ.


ಆ.9ರಂದು ಬೆಳಿಗ್ಗೆ ಗಣಪತಿ ಹೋಮ, ನಾಟ್ಯರಂಗ ಕಲಾ ಕೇಂದ್ರ ಪೆರ್ಲಂಪಾಡಿ ಪ್ರಸ್ತುತ ಪಡಿಸುವ ನೃತ್ಯ ನಿನಾದ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಬಳಿಕ ಬೃಂದಾವನ ನಾಟ್ಯಾಲಯ ಕುಂಬ್ರ ಬಗಳದವರಿಂದ ಕಾರ್ಯಕ್ರಮ ವೈವಿಧ್ಯ ನಡೆಯಲಿದೆ. ಸಂಜೆ ಭಜನಾ ಕಾರ್ಯಕ್ರಮ, ಮಹಾಪೂಜೆ ಬಳಿಕ ಶ್ರೀ ಗಣೇಶ ವಿಗ್ರಹದ ಶೋಭಾಯಾತ್ರೆ ಆರಂಭಗೊಳ್ಳಲಿದೆ. ಸಂಜೆ ಕುಂಬ್ರ ಅಶ್ವತ್ಥಕಟ್ಟೆ ಬಳಿ ಸ್ನೇಹ ಸಾಗರ ರಿಕ್ಷಾ ಚಾಲಕ ಮಾಲಕರ ಸಂಘದ ಪ್ರಾಯೋಜಕತ್ವದಲ್ಲಿ ಗಾನಸಿರಿ ಕಲಾ ಕೇಂದ್ರ ಪುತ್ತೂರು ಇದ್ರ ಕಿರಣ್ ಕುಮಾರ್ ಪುತ್ತೂರು ಬಳಗದಿಂದ ‘ರಸಮಂಜರಿ’ ಕಾರ್ಯಕ್ರಮ ನಡೆಯಲಿದೆ.


ಧಾರ್ಮಿಕ ಸಭಾ ಕಾರ್ಯಕ್ರಮ
ಆ.27ರಂದು ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಪ್ರೋಫೆಸರ್ ಡಾ| ಸತ್ಯವತಿ ಆರ್.ಆಳ್ವ ಮುಗೇರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ. ‘ ಧಾರ್ಮಿಕ ನಂಬಿಕೆ ಮತ್ತು ಸಾಮಾಜಿಕ ಬದಲಾವಣೆ’ ಎಂಬ ವಿಷಯದಲ್ಲಿ ವಕೀಲರಾದ ಪ್ರಸಾದ್ ಕುಮಾರ್ ರೈ ಪುಣಚ ಉಪನ್ಯಾಸ ನೀಡಲಿದ್ದಾರೆ. ಆ.28ರಂದು ಬೆಳಿಗ್ಗೆ ಸುಳ್ಯ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ|ಲೀಲಾವತಿ ಡಿ.ವಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಗೌರವ ಉಪಸ್ಥಿತಿಯಲ್ಲಿ ಮೀರಾ ಮೋಹನ್ ರೈ ಓಲೆಮುಂಡೋವು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಸಂಸ್ಕಾರ ವಿಷಯದಲ್ಲಿ ಧಾರ್ಮಿಕ ಚಿಂತಕ ಗಣರಾಜ ಭಟ್ ಕೆದಿಲ ಧಾರ್ಮಿಕ ಉಪನ್ಯಾಸ ನೀಡಲಿದ್ದು ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆ.೨೯ ರಂದು ಬೆಳಿಗ್ಗೆ ಕೆಯ್ಯೂರು ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಕೆ ಜಯರಾಮ ರೈ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಪಾಪೆಮಜಲು ಶಾಲಾ ಮುಖ್ಯಗುರು ಶಶಿಕಲಾ ಎಂ ಕಾರ್ಯಕ್ರಮ ಉದ್ಘಾಟಿಸಲಿದ್ದು ಮೂಲ ನಂಬಿಕೆ ಮತ್ತು ಧರ್ಮ ಜಾಗೃತಿ ವಿಷಯದಲ್ಲಿ ವಕೀಲರಾದ ಮನೋಹರ ಎ.ಅರುವರಗುತ್ತು ಉಪನ್ಯಾಸ ನೀಡಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಗಣೇಶನ ಕೃಪೆಗೆ ಪಾತ್ರರಾಗುವಂತೆ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಮೋನಪ್ಪ ಪೂಜಾರಿ ಬಡಕ್ಕೋಡಿ, ಪ್ರಧಾನ ಕಾರ್ಯದರ್ಶಿ ಹರೀಶ್ ರೈ ಮುಗೇರು, ಉಪಾಧ್ಯಕ್ಷರುಗಳಾದ ರತನ್ ರೈ ಕುಂಬ್ರ, ದಿನೇಶ್ ಗೌಡ ಪಂಜಿಗುಡ್ಡೆ, ಕೋಶಾಧಿಕಾರಿ ರಾಜ್‌ಪ್ರಕಾಶ್ ರೈ ಕುಂಬ್ರ, ಜೊತೆ ಕಾರ್ಯದರ್ಶಿ ಸುಷ್ಮಾ ಸತೀಶ್ ಪೂಜಾರಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿ ಸಂಚಾಲಕ ರಾಜೇಶ್ ರೈ ಪರ್ಪುಂಜ, ಅಂಕಿತ್ ರೈ ಕುಯ್ಯಾರು ಹಾಗೂ ಶ್ರೀ ರಾಮ ಭಜನಾ ಮಂದಿರದ ಕಾರ್ಯಕಾರಿ ಸಮಿತಿ ಮತ್ತು ಸರ್ವ ಸದಸ್ಯರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here