ಆ. 27 ರಿಂದ ಸವಣೂರಿನಲ್ಲಿ‌ 3 ದಿನ‌ ಸಾರ್ವಜನಿಕ ಶ್ರೀ ಗಣೇಶೋತ್ಸವ

0

ಪುತ್ತೂರು: ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಆ.27 ರಿಂದ ಆ.29 ರವರೆಗೆ 3 ದಿನಗಳ ಕಾಲ ಸವಣೂರು ಶ್ರೀ ವಿನಾಯಕ ಸಭಾಭವನದಲ್ಲಿ
43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ.

ಆ. 27 ರಂದು ಗಣೇಶ ಬಿಂಬ ಪ್ರತಿಷ್ಠಾಪನೆ ನಡೆಯಲಿದ್ದು, ಸವಣೂರಿನ ಉದ್ಯಮಿ ಎನ್ ಸುಂದರ ರೈ ಅವರಿಂದ ಗಣಪತಿ ದೇವರಿಗೆ ಬೆಳ್ಳಿಯ ಕಿರೀಟ ಸಮರ್ಪಣೆ ನಡೆಯಲಿದೆ. ಬಳಿಕ ಭಜನೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.ಆ. 28 ರಂದು ಬೆಳಿಗ್ಗೆ ಗಣಹೋಮ, ಭಜನೆ, ಮಧ್ಯಾಹ್ನ ಅನ್ನಸಂತರ್ಪಣೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ. ಆ. 29 ರಂದು ಬೆಳಿಗ್ಗೆ ಗಣಹೋಮ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ,ಮಧ್ಯಾಹ್ನ ಸಭಾ ಕಾರ್ಯಕ್ರಮ, ಅನ್ನಸಂತರ್ಪಣೆ, ಸಂಜೆ ಶ್ರೀ ವಿಘ್ನೇಶ್ವರನ ಶೋಭಾಯಾತ್ರೆಯು ಸರ್ವೆ ಗೌರಿ ಹೊಳೆಯ ತನಕ ನಡೆಯಲಿದೆ ಎಂದು ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ಅಧ್ಯಕ್ಷ ಪ್ರಭಾಕರ ಶೆಟ್ಟಿ ನಡುಬೈಲು ಹಾಗೂ ಕಾರ್ಯದರ್ಶಿ ಸತೀಶ್ ಬಲ್ಯಾಯ ಕನ್ನಡಕುಮೇರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here