ಪುತ್ತೂರು: ಕುಂಡಡ್ಕ -ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ16 ನೇ ವರ್ಷದ ಗಣೇಶೋತ್ಸವ ಆಚರಣೆ, ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ ಹಾಗೂ ನೇಸರ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ ಆ.27 ರಂದು ಮುಕ್ಕೂರಿನಲ್ಲಿ ನಡೆಯಲಿದೆ.
ಬೆಳಗ್ಗೆ ಸುಧೀರ್ ಕೊಂಡೆಪ್ಪಾಡಿ ದೀಪ ಬೆಳಗಿಸಲಿದ್ದು ಗಣೇಶೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಅನವುಗುಂಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಗ್ರಾ.ಪಂ.ಸದಸ್ಯರಾದ ಗುಲಾಬಿ ಬೊಮ್ಮೆಮ್ಮಾರು, ಚಂದ್ರಾವತಿ ಇಟ್ರಾಡಿ, ಯಶವಂತ ಜಾಲು, ಜಯಂತ ಕುಂಡಡ್ಕ, ಪ್ರಸಾದ್ ನಾಯ್ಕ ಕುಂಡಡ್ಕ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪ್ರಶಸ್ತಿ ಪ್ರಧಾನ, ಸಮ್ಮಾನ ಪ್ರತಿಭಾ ಪುರಸ್ಕಾರ
ಬೆಳಗ್ಗೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ವಹಿಸಲಿದ್ದು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಸಮಾಜ ಸೇವಾ ವಿಭಾಗದಲ್ಲಿ ರಕ್ಷಿತ್ ಕುಮಾರ್ ಪೆರುವಾಜೆ ಅವರಿಗೆ ನೇಸರ ವಾರ್ಷಿಕ ಪ್ರಶಸ್ತಿ-2025 ಪ್ರಧಾನ ಮಾಡಲಿದ್ದಾರೆ.ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಹಾಗೂ ಕ್ರೀಡಾಕೂಟ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.