ಕೆಯ್ಯೂರು: ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನ ಕೆಯ್ಯೂರು ಮತ್ತು ಶ್ರೀ ಗಣೇಶೋತ್ಸವ ಸಮಿತಿ ಕೆಯ್ಯೂರು ಇದರ ಆಶ್ರಯದಲ್ಲಿ ಆ.27ರಿಂದ 29ರ ವರೆಗೆ ಕೆಯ್ಯೂರು ದೇವಳದ ವಠಾರದಲ್ಲಿ ಶ್ರೀ ಗಣೇಶೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿಂದ ನಡೆಯಲಿದೆ ಎಂದು ಶ್ರೀ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕ್ಷೇತ್ರ ಕೆಯ್ಯೂರು ವ್ಯವಸ್ಥಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮಗಳು
ಆ.27ರಂದು ಬೆಳಿಗ್ಗೆ ಪ್ರಾರ್ಥನೆ,ಶ್ರೀ ಗಣೇಶ ವಿಗ್ರಹದ ಪ್ರತಿಷ್ಠೆ, ಗಣಪತಿ ಹವನ,ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಶ್ರೀದುರ್ಗಾ ಭಜನಾ ಮಂಡಳಿ ಕೆಯ್ಯೂರು ಇವರಿಂದ ಭಜನಾ ಕಾರ್ಯಕ್ರಮ, ನಂತರ ಶಾಲಾ ಮಕ್ಕಳಿಗೆ ಗಣಪತಿ ಚಿತ್ರ ಬಿಡಿಸುವ ಸ್ಪರ್ಧೆ, ಕೆಯ್ಯೂರು ಶಾಲಾ ವಿಧ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಭಕ್ತಿಗೀತೆ ಸ್ಪರ್ಧೆ,ರಾತ್ರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಹೆಗ್ಡೆ ಪುತ್ತೂರು ಇವರ ನೇತೃತ್ವದಲ್ಲಿ “ಭಕ್ತಿಗಾನ ವೈಭವ” ನಡೆಯಲಿದೆ.
ಆ.28ರಂದು ಬೆಳಿಗ್ಗೆ ಗಣಪತಿ ಹವನ,ಮಹಾಪೂಜೆ,ಅನ್ನಸಂತರ್ಪಣೆ ಸಂಜೆ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ರಾತ್ರಿ ಭಾರತೀಯ ಕಲಾ ಸಂಘ (ರಿ) ಸರಪಾಡಿ ಅಶೋಕ್ ಶೆಟ್ಟಿ ಅವರ ಸಾರಥ್ಯದಲ್ಲಿ ಯಕ್ಷಗಾನ ಬಯಲಾಟ “ಶ್ರೀರಾಮ ದರ್ಶನ” ನಡೆಯಲಿದೆ.
ಆ.29ರಂದು ಗಣಪತಿ ಹವನ,ಮಹಾಪೂಜೆ,ಅನ್ನಸಂತರ್ಪಣೆ,ಸಂಜೆ ಶ್ರೀ ಗಣೇಶ ವಿಗ್ರಹದ ಶೋಭಾಯಾತ್ರೆ, ಕುಣಿತ ಭಜನೆ, ಚೆಂಡೆ ಪ್ರದರ್ಶನ, ಶೋಭಾಯಾತ್ರೆ ದಿನ ಮಾಡಾವು ಅಯ್ಯಪ್ಪ ಭಜನಾ ಮಂದಿರದ ಬಳಿ ಯಕ್ಷಗಾನ ತಾಳ ಮದ್ದಳೆ ಪ್ರಸಂಗ “ಸುಭದ್ರ ಕಲ್ಯಾಣ” ನಡೆಯಲಿದೆ. ನಂತರ ಗೌರಿ ಹೊಳೆ ಸಂಗಮದಲ್ಲಿ ವಿಸರ್ಜನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.