ಬೊಳುವಾರು ಕ್ಷೇತ್ರದಲ್ಲಿ 2026ರ ಜನವರಿಯ ಪ್ರತಿಷ್ಠಾ ವಾರ್ಷಿಕೋತ್ಸವ, ನೇಮೋತ್ಸವ ಪೂರ್ವಭಾವಿ ಸಭೆ

0

ಪುತ್ತೂರು: ಬೊಳುವಾರು ಶ್ರೀ ದುರ್ಗಾಪರಮೇಶ್ವರಿ ಉಳ್ಳಾಳ್ತಿ ಮಲರಾಯ ಸಪರಿವಾರ ಕ್ಷೇತ್ರದ ಪ್ರತಿಷ್ಠಾ ವಾರ್ಷಿಕೋತ್ಸವ, 3 ವರ್ಷದ ನೇಮೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆಯು ಆ.24ರಂದು ಸಂಜೆ ಕ್ಷೇತ್ರದಲ್ಲಿ ನಡೆಯಿತು.


ನೇಮೋತ್ಸವ ಕುರಿತಂತೆ ಒಂದು ವಿಜ್ಞಾಪನೆ ರೀತಿಯಲ್ಲಿ ಮನೆ-ಮನೆಗೆ ತೆರಳಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಕ್ಷೇತ್ರಕ್ಕೆ ಬರುವಂತೆ ವ್ಯವಸ್ಥೆ ಮಾಡುವ ಮೂಲಕ 2026ರ ಜನವರಿ 24, 25ರಂದು ನಡೆಯುವ ವಾರ್ಷಿಕೋತ್ಸವ, ನೇಮೋತ್ಸವವನ್ನು ಅದ್ದೂರಿಯಲ್ಲಿ ನಡೆಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.


ನೇಮೋತ್ಸವಕ್ಕೆ ಸಂಬಂಧಿಸಿದಂತೆ ವಿವಿಧ ಸಮಿತಿಗೆ ಪದಾಧಿಕಾರಿಗಳ ನೇಮಕ ರಚನೆ ಮಾಡಿ ಜವಾಬ್ದಾರಿ ಹಂಚಿಕೆ ಮಾಡಲಾಯಿತು. ಸಭೆಯಲ್ಲಿ ದೇವಸ್ಥಾನದ ಪದಾಧಿಕಾರಿಗಳು, ಸದಸ್ಯರು, ವಿಶ್ವಸ್ಥ ಮಂಡಳಿ ಸದಸ್ಯರು, ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here