ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ಪುತ್ತೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಬಳಿಯ ವಳಾಲು ಎಂಬಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೂಲತ: ಬಂಟ್ವಾಳ ತಾಲೂಕಿನ ಬಿ.ಸಿ.ರೋಡು ಜೋಡುಮಾರ್ಗ ತಲಪಾಡಿ ಹೌಸ್ ನಿಜಾಮ್ ಮಂಝಿಲ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಮ್(33ವ.)ಬಂಧಿತ ಆರೋಪಿಯಾಗಿದ್ದಾನೆ. ಈತ ಪ್ರಸ್ತುತ ಬಜತ್ತೂರು ಗ್ರಾಮದ ವಳಾಲುನಲ್ಲಿ ಮದರಸ ಹತ್ತಿರ ದಾವೂದ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಈತನ ವಿರುದ್ಧ ಖೋಟಾನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿ 2023ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ ೦1/2೦23 ಕಲಂ 489 (ಬಿ) ಮತ್ತು (ಸಿ) ಜೊತೆಗೆ 34 ಭಾ.ದಂ.ಸಂ. ರಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದ ನಂತರ ಈತ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಈತನ ಮೇಲೆ 8 ಸಲ ಬಂಧನ ವಾರಂಟ್ ಹೊರಡಿಸಿತ್ತು. ಈತನ ಪತ್ತೆ ಕಾರ್ಯಾಚರಣೆ ಕೈಗೊಂಡ ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ಹಾಗೂ ವಾರಂಟ್ ಜಾರಿ ವಿಭಾಗದ ಸಿಬ್ಬಂದಿಗಳು ಆ.25ರಂದು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಳಾಲುನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪದಲ್ಲಿ ಆಪಾದಿತನ ವಿರುದ್ಧ ಕಲಂ: 269 BNS-2023 ಪ್ರಕಾರ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿ ವಿರುದ್ಧ ಹಲವು ಪ್ರಕರಣ:
ಆರೋಪಿ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣ ದಾಖಲಾಗಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣೆ ಅ.ಕ್ರ ಸಂಖ್ಯೆ 1/2023 ಕಲಂ: 489(A),(B)(ಅ), ಡಿ/ತಿ 34 IPC, ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಅ.ಕ್ರ ಸಂಖ್ಯೆ 128/2022 ಕಲಂ:392, 506, ಡಿ/ತಿ 34 IPC ರಂತೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿದೆ. ಅಲ್ಲದೇ ಈತನ ವಿರುದ್ಧ ಮಡಿವಾಳ ಪೊಲೀಸ್ ಠಾಣೆ ಅ.ಕ್ರ ಸಂಖ್ಯೆ 235/2022 ಕಲಂ: 489(A),(B), 420, ಡಿ/ತಿ 34 IPC ರಂತೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಉದ್ಘೋಷಣೆ ಹೊರಡಿಸಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಅ.ಕ್ರ ಸಂಖ್ಯೆ 147/2016 ಕಲಂ 398, 402 ಐಪಿಸಿ, ಮಂಗಳೂರು ಬರ್ಕೆ ಪೊಲೀಸ್ ಠಾಣೆ ಅ.ಕ್ರ ಸಂಖ್ಯೆ 93/2015 ಕಲಂ; 143, 323, 324 353, 427, 302 ಡಿ/ತಿ 149 IPC ಹಾಗೂ ಪುತ್ತೂರು ನಗರ ಪೊಲೀಸ್ ಠಾಣೆ ಅ.ಕ್ರ ಸಂಖ್ಯೆ 112/2017 ಕಲಂ; 120(b), 341, 323, 307, 427, ಡಿ/ತಿ 34 IPC ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ವಿಟ್ಲ ಪೊಲೀಸ್ ಠಾಣೆ ಅ.ಕ್ರ ಸಂಖ್ಯೆ 181/2015 ಕಲಂ 143, 147, 148, 341, 324, 307, 302, 120ಬಿ IPC ದಾಖಲಾಗಿದ್ದ ಪ್ರಕರಣ ನ್ಯಾಯಾಲಯದಲ್ಲಿ ಖುಲಾಸೆಗೊಂಡಿರುತ್ತದೆ ಎಂದು ದ.ಕ.ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here