ಈಶ್ವರಮಂಗಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಗಣೇಶೋತ್ಸವ

0

ಪುತ್ತೂರು: ಈಶ್ವರಮಂಗಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.27ರಂದು ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಶ್ರೀ ಗಣಪತಿಹೋಮ, ವಿಗ್ರಹ ಪ್ರತಿಷ್ಠೆ, 9.30 ರಿಂದ 11 ಗಂಟೆ ವರೆಗೆ ಭಜನಾ ಕಾರ್ಯಕ್ರಮ ನೆರವೇರಲಿದೆ. ಇದೇ ವೇಳೆ ಸಾರ್ವಜನಿಕ ಮನೋರಂಜನಾ ಕ್ರೀಡೆಗಳೂ ನಡೆಯಲಿವೆ. ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನೆರವೇರಲಿದೆ.


ಮಧ್ಯಾಹ್ನ 2 ಗಂಟೆಯಿಂದ ಭಕ್ತಿಗೀತೆ ಸ್ಪರ್ಧೆ ನಡೆಯಲಿದ್ದು, 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಸಂಜೆ 6 ಗಂಟೆಯಿಂದ ಶ್ರೀ ಗಣೇಶನ ವೈಭವದ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯು ದೇವಸ್ಥಾನದ ವಠಾರದಿಂದ ಹೊರಟು ಈಶ್ವರಮಂಗಲ ಮುಖ್ಯ ಪೇಟೆಯಲ್ಲಿ ಸಾಗಿ, ಪಟ್ಲಡ್ಕ ಹೊಳೆಯಲ್ಲಿ ಗಣೇಶನ ವಿಗ್ರಹವನ್ನು ವಿಸರ್ಜಿಸಲಾಗುತ್ತದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ತಾವೆಲ್ಲರೂ ಆಗಮಿಸಿ ತನು ಮನ ಧನಗಳಿಂದ ಸಹಕರಿಸುವಂತೆ ದೇವಾಲಯದ ಆಡಳಿತ ಮಂಡಳಿ ಹಾಗೂ ಗಣೇಶೋತ್ಸವ ಸಮಿತಿ, ಜೀರ್ಣೋದ್ದಾರ ಸಮಿತಿ, ಬೈಲುವಾರು ಸಮಿತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here