ನೆಲ್ಯಾಡಿ: ಬಜತ್ತೂರು ಗ್ರಾಮದ ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಕೃಷ್ಣ ಪ್ರಸಾದ್ ಉಡುಪ ಇವರ ನೇತೃತ್ವದಲ್ಲಿ ಬಜತ್ತೂರು-ಮುದ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 12ನೇ ವರ್ಷದ ಶ್ರೀ ಗಣೇಶೋತ್ಸವ ಮತ್ತು ಧಾರ್ಮಿಕ ಸಮಾರಂಭ ಆ.27ರಂದು ಬಜತ್ತೂರು ಮುದ್ಯ ಶ್ರೀ ಪಂಚಲಿAಗೇಶ್ವರ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 7ಕ್ಕೆ ವಿದ್ಯಾಗಣಪತಿ ಪ್ರತಿಷ್ಠೆ, 8ಕ್ಕೆ 12 ತೆಂಗಿನಕಾಯಿಯ ಗಣಹವನ, 8.30ಕ್ಕೆ ಶ್ರೀ ಪಂಚಲಿAಗೇಶ್ವರ ದೇವರಿಗೆ ನಿತ್ಯಪೂಜೆ, 8.30ರಿಂದ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ನಡ್ಪ-ಕಾಂಚನ ಇವರಿಂದ ಭಜನೆ, 9.30ರಿಂದ ಊರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, 11ರಿಂದ ಮಹಾಪೂಜೆ ನಡೆಯಲಿದೆ. 11.30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ನಿವೃತ್ತ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಶಿಶಿಲ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಉತ್ಸವ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ನೀರಕಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಮಧ್ಯಾಹ್ನ 1ರಿಂದ ಮುಂಡಾಜೆ ಕೀರ್ತನಾ ಕಲಾತಂಡದವರಿಂದ ಭಕ್ತಿಗಾನ ಯಕ್ಷ ನೃತ್ಯ ನಡೆಯಲಿದೆ. ಸಂಜೆ 2.30ಕ್ಕೆ ಶೋಭಾಯಾತ್ರೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಹೊರಟು ಪಡ್ಪು ದೈವಸ್ಥಾನದ ಮುಂಭಾಗದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ನೀರಕಟ್ಟೆ, ವಳಾಲು, ಮುಗೇರಡ್ಕ ಕ್ರಾಸ್ ಮೂಲಕ ಸಾಗಿ ಬೆದ್ರೋಡಿ ನರ್ಸರಿ ಬಳಿ ನೇತ್ರಾವತಿ ನದಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ. ಜಲಸ್ತಂಭನ ಸ್ಥಳದಲ್ಲಿ ಬೆದ್ರೋಡಿ ಶ್ರೀ ಸಿದ್ಧಿವಿನಾಯಕ ಭಜನಾ ತಂಡದವರಿAದ ಭಜನೆ ನಡೆಯಲಿದೆ. ಕಟ್ಟೆಪೂಜೆ ಬಳಿಕ ದೇವರ ಮೂರ್ತಿ ವಿಸರ್ಜನೆ ನಡೆಯಲಿದೆ ಎಂದು ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾದ ಸುಧಾ ರಾವ್, ಮುದ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಗೋಪಾಲ ವಳಾಲುದಡ್ಡ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.