ಪುತ್ತೂರು: ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆದ 16ರ ವಯೋಮಾನದ ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಜಿ.ಎಂ ಕೀರ್ತಿ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಮತ್ತು 80ಮೀ ಹರ್ಡಲ್ಸ್ ನಲ್ಲಿ ಕಂಚಿನ ಪದಕ ಪಡೆದಿರುತ್ತಾರೆ.
ಇವರಿಗೆ ತರಬೇತುದಾರರಾಗಿ ಬಾಲಚಂದ್ರ ಬಾರೆತ್ತಿಕುಮೇರ್ ಮತ್ತು ಶಾಲಾ ದೈಹಿಕ ಶಿಕ್ಷಕರಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ಇವರು ತರಬೇತಿ ನೀಡಿರುತ್ತಾರೆ.