ಈಶ್ವರಮಂಗಲ: ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ಶಿಶುವಾಟಿಕ ವಿಭಾಗದ ರಕ್ಷಕ ಶಿಕ್ಷಕ ಸಭೆಯು ಆ.26ರಂದು ನಡೆಯಿತು.

ಈ ಸಭೆಗೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಶೈಕ್ಷಣಿಕ ಪರಿವೀಕ್ಷನಾಧಿಕಾರಿಯಾಗಿರುವ ರಘುರಾಜ್ ಉಬರಡ್ಕ ಮಾತನಾಡಿ, ಮಕ್ಕಳ ಬೆಳವಣಿಗೆಯಲ್ಲಿ ಆಹಾರ ವಿಹಾರ, ವಿಚಾರ, ಮಕ್ಕಳನ್ನು ಬೆಳೆಸುವ ರೀತಿ ಹಾಗೂ ಚಟುವಟಿಕೆ ಆಧಾರಿತ ಶಿಕ್ಷಣದ ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿದರು.
ಶಾಲಾ ಪ್ರಾಂಶುಪಾಲರಾದ ಕೆ ಶಾಮಣ್ಣ ಮಾತನಾಡಿ, ಮಕ್ಕಳ ಉನ್ನತ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ನನ್ಯ ಅಚ್ಚುತ ಮೂಡತ್ತಾಯರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದಿಂದಲೇ ವಿದ್ಯಾರ್ಥಿಗಳಿಗೆ ಸಂಸ್ಕಾರಯುತವಾದ ಶಿಕ್ಷಣವನ್ನು ನೀಡುವುದರ ಜೊತೆಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರಾಶಸ್ತ್ಯವನ್ನು ನೀಡಲಾಗುತ್ತಿದೆ ಎಂದರು.
ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಡಾ.ಸೌಮ್ಯ ಹಾಗೂ ರತಿ ರಮೇಶ್ ಹಾಗೂ ಶಾಲಾ ಮುಖ್ಯ ಶಿಕ್ಷಕಿಯರಾದ ಸೌಮ್ಯ ಎ ಮತ್ತು ಲತಾ ಡಿ ಕೆ ಉಪಸ್ಥಿತರಿದ್ದರು. ಶಿಕ್ಷಕಿ ಶ್ವೇತಾ ಎಸ್ ಪ್ರಾರ್ಥಿಸಿ, ಸಂಸ್ಥೆಯ ಮುಖ್ಯ ಶಿಕ್ಷಕಿ ಸೌಮ್ಯ.ಎ ಸ್ವಾಗತಿಸಿ, ಶಿಕ್ಷಕಿ ಅನುಷಾ ಸಿ ಎಚ್ ವಂದಿಸಿದರು. ಶಿಕ್ಷಕಿ ಗುಣಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.