ಪುತ್ತೂರು: ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಬಂಟ್ಸ್ ಹಾಸ್ಟೆಲ್ ನಲ್ಲಿ ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾಪನದ ಆಶ್ರಯದಲ್ಲಿ ನಡೆಯುವ ಗಣೇಶೋತ್ಸವ ಕಾರ್ಯಕ್ರಮಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘ ಪುತ್ತೂರು ತಾಲ್ಲೂಕು ಸಮಿತಿ ಹಾಗೂ ಪುತ್ತೂರು ತಾ| ಬಂಟರ ಸಂಘದ ವತಿಯಿಂದ ಆ. 26 ರಂದು ಹಸಿರು ಹೊರೆ ಕಾಣಿಕೆ ಯನ್ನು ಸರ್ಮಪಣೆ ಮಾಡಲಾಯಿತು.
ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರು ಹಸಿರುಹೊರೆ ಕಾಣಿಕೆಗೆ ಚಾಲನೆಗೈದರು, ಬಂಟರ ಯಾನೆ ನಾಡವರ ಮಾತೃ ಸಂಘದ ತಾಲ್ಲೂಕು ಸಮಿತಿಯ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ನಿರ್ದೇಶಕರುಗಳಾದ ಜೈರಾಜ್ ಭಂಡಾರಿ ನೋಣಾಲು ಡಿಂಬ್ರಿ, ಜಯಪ್ರಕಾಶ್ ರೈ ನೂಜಿಬೈಲು, ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಶೆಟ್ಟಿ, ಕಚೇರಿ ವ್ಯವಸ್ಥಾಪಕಿ ರಂಜಿನಿ ಶೆಟ್ಟಿ, ರವಿಚಂದ್ರ ರೈ, ಭಾಸ್ಕರ ರೈ, ಅರುಣ್ ಪ್ರಕಾಶ್ ರೈ ಉಪಸ್ಥಿತರಿದ್ದರು