ಪುತ್ತೂರು: ಮುಂಡೂರು ಗ್ರಾಮದ ಪಜಿಮಣ್ಣ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯು ಆ.27ರಂದು ಕ್ಷೇತ್ರದ ತಂತ್ರಿ ವೇ.ಮೂ ಸುಬ್ರಹ್ಮಣ್ಯ ಬಳ್ಳಕ್ಕುರಾಯರವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೆಳಿಗ್ಗೆ ಗಣಪತಿ ಪ್ರತಿಷ್ಠೆ, ಗಣಹೋಮ, ನಂತರ ಹಿಂದೂ ಬಾಂಧವರಿಗೆ ವಿವಿಧ ಆಟೋ ಸ್ಪರ್ಧೆಗಳು ನಡೆಯಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕಣ್ಣಾರಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಅಕ್ಷಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಜಯಂತ ನಡುಬೈಲು, ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್.ಎಸ್.ಡಿ., ಪ್ರಗತಿಪರ ಕೃಷಿಕ ಹೆಗ್ಗಪ್ಪ ರೈ ಪೊನೋನಿ, ಉದ್ಯಮಿ ವೆಂಕಟೇಶ್ ಅಯ್ಯಂಗಾರ, ಕುಕ್ಕಿನಡ್ಕ ಸುಬ್ರಾಯ ಭಜನಾ ಮಂಡಳಿ ಅಧ್ಯಕ್ಷ ಎ.ಪದ್ಮನಾಭ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ರಂಗಪೂಜೆ ನಡೆದ ಬಳಿಕ ಗಣೇಶ ವಿಗ್ರಹ ವೈಭವದ ಶೋಭಾಯಾತ್ರೆ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕರಷ್ಣ ಕಣ್ಣಾರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.