ಹಿರೇಬಂಡಾಡಿ: ಹುಲ್ಲಿಗೆ ಸಿಂಪಡಿಸಲು ತಂದಿದ್ದ ಔಷಧಿ ಸೇವಿಸಿ ಅಸ್ವಸ್ಥ ವ್ಯಕ್ತಿ ಸಾವು

0

ಹಿರೇಬಂಡಾಡಿ: ಹುಲ್ಲಿಗೆ ಸಿಂಪಡಿಲು ತಂದಿರಿಸಿದ್ದ ಔಷಧಿ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಹಿರೇಬಂಡಾಡಿ ಗ್ರಾಮದಲ್ಲಿ ನಡೆದಿದೆ.


ಹಿರೇಬಂಡಾಡಿ ಗ್ರಾಮದ ಕಾಚಿಲ ನಿವಾಸಿ ಐತ್ತಪ್ಪ ಗೌಡ(70ವ.)ಮೃತಪಟ್ಟವರಾಗಿದ್ದಾರೆ. ಇವರು ಬಿ.ಪಿ. ಹಾಗೂ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ಆ.23ರಂದು ರಾತ್ರಿ 9.30ರಿಂದ ಆ.24ರ ಬೆಳಿಗ್ಗೆ 6.30ರ ಮಧ್ಯದ ಅವಧಿಯಲ್ಲಿ ತಮ್ಮ ಮನೆಯಲ್ಲಿ ಹುಲ್ಲಿಗೆ ಸಿಂಪಡಿಸಲು ತಂದಿದ್ದ ಜೌಷಧಿಯನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು.

ಇದನ್ನು ಗಮನಿಸಿದ ಮನೆಯವರು ಚಿಕಿತ್ಸೆ ಬಗ್ಗೆ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿ ಒಳರೋಗಿಯಾಗಿ ದಾಖಲು ಮಾಡಿಕೊಂಡಿದ್ದರು. ಆದರೆ ಐತ್ತಪ್ಪ ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಪುತ್ರ ರಿತೇಶ್ ಕುಮಾರ್ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here