ಪುತ್ತೂರು:ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯಾಗಿರುವ ಬೆಳ್ಳಾರೆ ಗ್ರಾಮ ಪಂಚಾಯಿತಿ 1ನೇವಾರ್ಡ್ ಸದಸ್ಯ ಕೆ.ಮಹಮ್ಮದ್ ಇಕ್ಬಾಲ್ ಸದಸ್ಯತ್ವ ರದ್ದಾಗಿದೆ.
2024-25ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲಿಸದೇ ಇರುವ ಕಾರಣ ರಾಜ್ಯ ಚುನಾವಣಾ ಆಯೋಗದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ ತೆಗೆದುಹಾಕಿದ್ದು, ಅವರ ಸದಸ್ಯ ಸ್ಥಾನ ಖಾಲಿ ಎಂದು ಘೋಷಿಸಲಾಗಿದೆ.ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯಾಗಿ ಬಂಧಿತನಾಗಿರುವ ಕೆ.ಮಹಮ್ಮದ್ ಇಕ್ಬಾಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ.