ಪುತ್ತೂರು: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಅನುಷ್ಠಾನಗೊಂಡ ಶ್ರೀ ವಿಷ್ಣು ಸಂಜೀವಿನಿ ಗ್ರಾ.ಪಂ.ಮಟ್ಟದ ಒಕ್ಕೂಟ ಬನ್ನೂರು ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಆ.18ರಂದು ಬನ್ನೂರು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.
ಆರಂಭದಲ್ಲಿ ಸಂಘದ ಸದಸ್ಯೆಯರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಯಿತು. ಮಹಿಳೆಯರು ಮನೆಯಲ್ಲಿ ತಯಾರಿಸಿ ತಂದ ಪೌಷ್ಟಿಕ ಆಹಾರದ ಪ್ರದರ್ಶನ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಎಲ್ಸಿಆರ್ಪಿ ಭವ್ಯ ಅವರು ಮಾದಕ ವ್ಯಸನದ ಬಗ್ಗೆ ಮಾಹಿತಿ ನೀಡಿದರು. ಸಿಹೆಚ್ಒ ಸೌಮ್ಯರವರು ರೇಬಿಸ್ ರೋಗದ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆ ಅರುಣರವರು ಸ್ವಚ್ಛತೆಯಲ್ಲಿ ಸಂಘದ ಸದಸ್ಯರ ಪಾತ್ರ, ಸಂಘದಿಂದ ಮಹಿಳೆಯರಿಗೆ ಬ್ಯಾಂಕ್ನಲ್ಲಿ ಸಿಗುತ್ತಿರುವ ಸಾಲ ಸೌಲಭ್ಯಗಳು, ಸಂಘದ ಮಹಿಳೆಯರಿಗೆ ಇರುವ ೫ ನಾರಿ ಶಕ್ತಿಗಳ ಬಗ್ಗೆ ವಿವರಿಸಿದರು.
ಬನ್ನೂರು ಗ್ರಾ.ಪಂ.ಅಧ್ಯಕ್ಷೆ ಸ್ಮಿತಾ, ಗ್ರಾ.ಪಂ.ಉಪಾಧ್ಯಕ್ಷ ಶೀನಪ್ಪ ಕುಲಾಲ್, ಸದಸ್ಯರಾದ ಶ್ರೀನಿವಾಸ ಪೂಜಾರಿ, ಜಯ ಅವರು ಸಂದರ್ಭೋಚಿತವಾಗಿ ಮಾತನಾಡಿದರು. ಕೊನೆಯಲ್ಲಿ ಆಟೋಟ ಹಾಗೂ ಪೌಷ್ಟಿಕ ಆಹಾರ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು. ಪೌಷ್ಟಿಕ ಆಹಾರ ತಯಾರಿಸಿ ತಂದ ಸದಸ್ಯರಿಗೆ ಪ್ರೋತ್ಸಾಹಕ ಬಹುಮಾನ ನೀಡಲಾಯಿತು.
ಕಾರ್ಯದರ್ಶಿ ಸ್ವಾತಿ ವರದಿ ಮಂಡಿಸಿದರು. ಕೋಶಾಧಿಕಾರಿ ಧನ್ಯ ಲೆಕ್ಕ ಪರಿಶೋಧನಾ ವರದಿ ವಾಚಿಸಿದರು. ಪುಣ್ಯಶ್ರೀ ಸಂಘದ ಸದಸ್ಯೆ ತಾರಾ ಅನುಮೋದಿಸಿದರು. ಒಕ್ಕೂಟದ ಅಧ್ಯಕ್ಷೆ ರಮ್ಯಾಕುಮಾರಿ ಸ್ವಾಗತಿಸಿದರು. ಮೂಕಾಂಬಿಕಾ ಸಂಘದ ಸದಸ್ಯೆ ಶೋಭಾ ವಂದಿಸಿದರು. ಚಿಗುರು ಸಂಜೀವಿನಿ ಸಂಘದ ಸದಸ್ಯರು ಪ್ರಾರ್ಥಿಸಿದರು. ಸಭೆಯಲ್ಲಿ ಸಂಘದ ಸದಸ್ಯೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ. ಸದಸ್ಯರು, ಸಿಬ್ಬಂದಿಗಳು, ಒಕ್ಕೂಟದ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.