ಪುತ್ತೂರು: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಸುವರ್ಣ ಸಂಭ್ರಮದಲ್ಲಿರುವ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆ ಈಶ್ವರಮಂಗಲ ಆಶ್ರಯದಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಆ. 26 ರಂದು ಪಂಚಲಿಂಗೇಶ್ವರ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಶ್ರೀ ಪಂಚಲಿಂಗೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ಕುಂಜತ್ತಾಯರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ರಘುನಾಥ ರೈ ಕುತ್ಯಾಳ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಫೌಝಿಯಾ, ಉಪಾಧ್ಯಕ್ಷ ರಾಮ ಮೇನಾಲ, ನಿವೃತ್ತ ಶಿಕ್ಷಕ ನಾಗಪ್ಪ ಗೌಡ ಬೊಮ್ಮೆಟ್ಟಿ, ಶ್ರೀ ಗಜಾನನ ವಿದ್ಯಾಸಂಸ್ಥೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಆನಂದ ರೈ ಸಾಂತ್ಯ, ಶ್ರೀ ಪಂಚಲಿಂಗೇಶ್ವರ ವಿದ್ಯಾಸಂಸ್ಥೆಯ ನಿರ್ದೇಶಕ ರವಿರಾಜ್ ರೈ ಸಜಂಕಾಡಿ, ನಿರ್ದೇಶಕ ಕೃಷ್ಣಪ್ಪ ಗೌಡ, ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ಅಣ್ಣಯ್ಯ ಗೌಡ ಉರಿಕ್ಕಾಡಿ, ಸುಭೋದ ಪ್ರೌಢಶಾಲೆ ಪಾಣಾಜೆ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ರೈ, ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಸೀತಾರಾಮ ಗೌಡ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ರಘುನಾಥ ರೈಯವರನ್ನು ಗೌರವಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ವನಿತಾ ಪ್ರಾಸ್ತಾವಿಕ ಮಾತನಾಡಿ ಶ್ರೀ ಪಂಚಲಿಂಗೇಶ್ವರ ವಿದ್ಯಾಸಂಸ್ಥೆಯ ಸಂಚಾಲಕ ನಿವೃತ್ತ ಮುಖ್ಯಶಿಕ್ಷಕ ಸರ್ವತ್ತೋಮ ಬೋರ್ಕರ್ ಸ್ವಾಗತಿಸಿ, ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮುರಲಿ ಮೋಹನ್ ಶೆಟ್ಟಿ ನಿರೂಪಿಸಿದರು. ಶಿಕ್ಷಕಿ ವಿನುತಾ ವಂದಿಸಿದರು.
ವಾಲಿಬಾಲ್ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ ಪ್ರಥಮ ಷಣ್ಮುಖ ದೇವ ಪ್ರೌಢಶಾಲೆ ಪ್ರಥಮ, ಮಣಿಕ್ಕರ ಸರಕಾರಿ ಪ್ರೌಢಶಾಲೆ ದ್ವಿತೀಯ, ಹುಡುಗಿಯರ ವಿಭಾಗದಲ್ಲಿ ಪಾಪೆಮಜಲು ಸರಕಾರಿ ಪ್ರೌಢಶಾಲೆ ಪ್ರಥಮ, ಇರ್ದೆ ಉಪ್ಪಳಿಗೆ ಸರಕಾರಿ ಪ್ರೌಢಶಾಲೆ ದ್ವಿತೀಯ ಸ್ಥಾನ ಗಳಿಸಿದರು. ಕ್ರೀಡಾಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.