ಆ.30: ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ – ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ಪದಾಧಿಕಾರಿಗಳಿಗೆ ಬೀಳ್ಕೊಡುಗೆ

0

ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ಶಾಖೆಯ 2024-25ನೇ ಸಾಲಿನ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ಪದಾಧಿಕಾರಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮಗಳು ಆ.30ರಂದು ಸರಕಾರಿ ನೌಕರರ ಸಂಘದ ಮೇರಿ ದೇವಾಸಿಯಾ ಸಭಾಂಗಣದಲ್ಲಿ ನಡೆಯಲಿದೆ.


ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ತಹಶೀಲ್ದಾರ್ ಎಸ್.ಬಿ ಕೂಡಲಗಿ ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ. ಸರಕಾರಿ ನೌಕರರ ಸಂಘದ ದ.ಕ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಎಂ.ಎಸ್., ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಶ್ರೀಪತಿ ರಾವ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪುತ್ತೂರು ಶಾಖಾ ವ್ಯವಸ್ಥಾಪಕ ನಾಗರಾಜ್ ಕೆ.ಎನ್. ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಂಘದ ಪದಾದಿಕಾರಿಗಳಾಗಿದ್ದು ವಯೋನಿವೃತ್ತಿ ಪಡೆದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪದ್ಮಾವತಿ ಎಂ.ಆರ್. ಹಾಗೂ ಚಾಲಕ ಲೀಲಯ್ಯ ಎಂ. ರವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here