ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಗಣಪತಿ ಅಥರ್ವಶೀರ್ಷ ಹವನವು ನಡೆಯಿತು. ಸಾಧ್ವಿ ಶ್ರೀ ಮಾತಾನಂದಮಯೀಯವರು ದಿವ್ಯ ಸಾನಿಧ್ಯ ಕರುಣಿಸಿದ್ದರು. ವೇ|ಮೂ| ಚಂದ್ರಶೇಖರ ಉಪಾಧ್ಯಾಯರ ನೇತೃತ್ವದಲ್ಲಿ ಹವನ ನಡೆಯಿತು. ಶ್ರೀ ಸಂಸ್ಥಾನದ ಸಹಸಂಸ್ಥೆಗಳ ಪ್ರಮುಖರು, ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.