ಉಪ್ಪಿನಂಗಡಿ: 49ನೇ ವರ್ಷದ ಶ್ರೀ ಗಣೇಶೋತ್ಸವ

0

ಉಪ್ಪಿನಂಗಡಿ: ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುವ 49ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.27ರಂದು ಸಾಮೂಹಿಕ ಪ್ರಾರ್ಥನೆಯೊಂದಿಗೆ ದೇವರ ವಿಗ್ರಹದ ಪ್ರತಿಷ್ಠಾಪನೆ ನಡೆಯಿತು.


ಬಳಿಕ ಗಣಹೋಮ, ಭಜನಾ ಸೇವೆಗಳು, ಆಟೋಟ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಭಕ್ತಿ ಗೀತೆ ಸ್ಪರ್ಧೆ, ಚಿತ್ರ ಸ್ಪರ್ಧೆಗಳು ನಡೆದು ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಿಸಲಾಯಿತು. ಸಂಜೆ ಭಕ್ತಿ- ಭಾವ- ಜನಪದ ಹಾಡುಗಳನ್ನೊಗೊಂಡ ರಸಮಂಜರಿ ನಡೆಯಿತು. ರಾತ್ರಿ ಮಹಾಪೂಜೆಯಾಗಿ ಪ್ರಸಾದ ವಿತರಣೆ ನಡೆದು, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭ ಸಮಿತಿಯ ಅಧ್ಯಕ್ಷರಾದ ಕೆ. ಸುಧಾಕರ ಶೆಟ್ಟಿ ಗಾಂಧಿಪಾರ್ಕ್, ಕೋಶಾಧಿಕಾರಿ ಚಂದ್ರಹಾಸ್ ಹೆಗ್ಡೆ, ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ ಶ್ರೀನಿಧಿ, ಉಪಾಧ್ಯಕ್ಷರಾದ ಯು. ಯತೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಶರತ್ ಕೋಟೆ, ಕೀರ್ತನ್ ಕುಮಾರ್ ಶೆಟ್ಟಿ ಕೊಲ ಮತ್ತಿತರರು ಉಪಸ್ಥಿತರಿದ್ದರು.

ಪೋಟೋ: ಉಬಾರ್ ಗಣಪ

LEAVE A REPLY

Please enter your comment!
Please enter your name here