ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ಶಾಶ್ವತ ಚಪ್ಪರ ನಿರ್ಮಾಣದ ವಿಜ್ಞಾಪನಾ ಪತ್ರ ಬಿಡುಗಡೆ

0

ವಿಟ್ಲ: ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ಸೋಣ 10ರ ವಿಶೇಷ ಪೂಜೆಯ ಸಂದರ್ಭದಲ್ಲಿ ಕ್ಷೇತ್ರದ ಒಳಾಂಗಣಕ್ಕೆ ಶಾಶ್ವತ ಚಪ್ಪರ ನಿರ್ಮಾಣದ ಹಿನ್ನೆಲೆಯಲ್ಲಿ ಮಾಡಲಾದ ವಿಜ್ಞಾಪನಾ ಪತ್ರವನ್ನು ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿರವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಮೊಕ್ತೇಸರರಾದ ಎಂ.ಕೆ. ಕುಕ್ಕಾಜೆ , ಕಾಳಿಕಾ ಕಲಾ ಸಂಘದ ಅಧ್ಯಕ್ಷರಾದ ವಾಸಪ್ಪ ಹಿರೇಬಂಡಾಡಿ, ಮಹಿಳಾ ಸಂಘದ ಅಧ್ಯಕ್ಷೆ ಪುಷ್ಪಾ ಕಾಮಜಲು, ಸತೀಶ್ ಬಾಯಾರು, ಜಾಸ್ಮಿನ್ ಗಣೇಶ್ ನರಿಮೊಗರು , ಸಂಜೀವ ಕುಲಾಲ್ ಪಳನೀರು ಸೇರಿದಂತೆ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here