ಪಡುಮಲೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

0

ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಡುಮಲೆ ಇದರ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಆ.27ರಂದು ಪೂರ್ವಾಹ್ನ ಶ್ರೀ ದೇವಾಲಯದಲ್ಲಿ ಕದಿರು ಪೂಜೆ, ಶ್ರೀ ಗಣಪತಿ ವಿಗ್ರಹ ಪ್ರತಿಷ್ಠೆ, ನಡೆದು ಬಳಿಕ ವಿವಿಧ ಭಜನಾ ತಂಡದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.
10ರಿಂದ ಕಲಾರತ್ನ ಶಂ.ನಾ. ಅಡಿಗ ಕುಂಬ್ಲೆ ಇವರಿಂದ “ಭೂಕೈಲಾಸ”, ಹರಿಕಥಾ ಸತ್ಸಂಗ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12.30ಕ್ಕೆ ಶ್ರೀ ದೇವರಿಗೆ ಮಹಾಪೂಜೆ ನಡೆದು ಬಳಿಕ ಶ್ರೀ ಮಹಾಗಣಪತಿ ದೇವರಿಗೆ ಮಹಾಪೂಜೆ ಮಹಾಮಂಗಳಾರತಿ ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.


ವಿವಿಧ ಸ್ಪರ್ಧೆಗಳು
ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಗಣೇಶನ ಚಿತ್ರಬಿಡಿಸುವುದು ಮತ್ತು ಭಕ್ತಿಗೀತೆ, ಸಾರ್ವಜನಿಕರಿಗೆ ಭಕ್ತಿಗೀತೆ ಸ್ಪರ್ಧೆ ನಡೆದು ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಮತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಸಮಾಧಾನಕರ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.

ಸಂಜೆ ಗಂ.4 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಬಳಿಕ ಶ್ರೀ ಗಣಪತಿ ದೇವರ ಶೋಭಾಯಾತ್ರೆ ಚಾಲನೆ ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಲ್ಲಿಸಿದರು. ಪುತ್ತೂರು ದ್ವಾರಕಾ ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ರವರು ತೆಂಗಿನಕಾಯಿ ಹೊಡೆಯುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದರು.


ಈ ಸಂಧರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾದ ಶ್ರೀನಿವಾಸ್ ಭಟ್, ಚಂದುಕೂಡ್ಲು, ಮನೋಜ್ ರೈ ಪೇರಾಲು,ಕೃಷ್ಣ ರೈ ಕುದ್ದಾಡಿ ಜನಾರ್ಧನ ಪೂಜಾರಿ ಪದಡ್ಡ,
ಪಡುಮಲೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ರೈ ಕಟ್ಟಾವು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಗಂಗಾಧರ ರೈ ಮೇಗಿನಮನೆ, ಉಪಾಧ್ಯಕ್ಷ ರಾಜೇಶ್ ರೈ ಮೇಗಿನಮನೆ, ಕಾರ್ಯದರ್ಶಿ ರಘುರಾಮ ಪಾಟಾಳಿ ಶರವು ಕೋಶಾಧಿಕಾರಿ ಉತ್ತಮ ಭಟ್ ಪಡ್ಡು ಶ್ರೀ ಕ್ಷೇತ್ರ ಪಡುಮಲೆ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಉದಯ ಕುಮಾರ್ ಪಡುಮಲೆ, ಪುರಂದರ ರೖೆ ಕುದ್ಕಾಡಿ, ಶ್ರೀನಿವಾಸ್ ಗೌಡ ಕನ್ನಯ, ಗೋಪಾಲ ನಾಯ್ಕ ದೊಡ್ಡಡ್ಕ, ಶಂಕರಿ ಪಟ್ಟೆ, ಶ್ರೀಮತಿ ಕನ್ಶಡ್ಕ, ಬಡಗನ್ನೂರು ಗ್ರಾ.ಪಂ ಉಪಾಧ್ಯಕ್ಷೆ ಸುಶೀಲ ಪಕ್ಯೊಡ್, ಸದಸ್ಯರಾದ ರವಿರಾಜ ರೖೆ ಸಜಂಕಾಡಿ, ಸಂತೋಷ ಆಳ್ವ ಗಿರಿಮನೆ, ಸುಜಾತ ಮೖೆಂದನಡ್ಕ, ಕುಮಾರ ಅಂಬಟೆಮೂಲೆ, ಲಿಂಗಪ್ಪ ಮೋಡಿಕೆ, ಪಡುಮಲೆ ಸಾಂಸ್ಕೃತಿಕ ಸೇವಾ ಸಂಘದ ಅಧ್ಯಕ್ಷ ರಾಮಣ್ಣ ಗೌಡ ಬಸವ ಹಿತ್ತಿಲು, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ವಾಣಿಶ್ರೀ ಪಡುಮಲೆ, ಮಾಜಿ ಅಧ್ಯಕ್ಷೆ ಸವಿತಾ ಗೆಜ್ಜೆಗಿರಿ, ನವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ ಗಿರಿಮನೆ, ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಸಂಚಾಲಕರು ಹಾಗೂ ಸರ್ವಸದಸ್ಯರು, ಮತ್ತು ಊರ ಭಕ್ತಾದಿಗಳು ಭಾಗವಹಿಸಿದರು.


ಆಕರ್ಷಣಿಯ ವೈಭವದ ಶೋಭಾಯಾತ್ರೆ
ಶ್ರೀ ಗಣೇಶನ ಆಕರ್ಷಣಿಯ ವೈಭವದ ಶೋಭಾಯಾತ್ರೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ ಸನ್ನಿಧಿಯಿಂದ ಗೊಂಬೆ ಕುಣಿತ ಭಜನ, ಸಿಂಗಾರಿ ಮೇಳ, ವಾಯರಿನ್, ಇತ್ಯಾದಿ ವೈವಿಧ್ಯಮಯ ಆಕರ್ಷಣೆಗಳೊಂದಿಗೆ ಮೈಂದನಡ್ಕ – ಕೊೖಲ-ಮುಡಿಪಿನಡ್ಕ ಮಾರ್ಗವಾಗಿ ಪಟ್ಟೆಗೆ ಸಾಗಿ, ಬಳಿಕ ಪಟ್ಟೆ ಶ್ರೀ ಕೃಷ್ಣ ಯುವಕ ಮಂಡಲ ಇವರ ಸಹಕಾರದೊಂದಿಗೆ ಪಟ್ಟೆ ಆರೆಪ್ಪಾಡಿ ಕ್ಷೀರಹೊಳೆಯ ದಂಡದಲ್ಲಿ ಶ್ರೀ ಗಣೇಶನಿಗೆ ವಿಶೇಷ ಪೂಜೆ ಪ್ರಸಾದ ವಿತರಣೆ ನಡೆದು ಬಳಿಕ ಶ್ರೀ ಗಣಪತಿ ವಿಗ್ರಹ ವಿಸರ್ಜನೆ ನಡೆಯಿತು ಬಳಿಕ ಸಾರ್ವಜನಿಕ ಆನ್ನಪ್ರಸಾದ ವಿತರಣೆ ನಡೆಯಿತು.

LEAVE A REPLY

Please enter your comment!
Please enter your name here