ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತಿ ಮಾರ್ಗದರ್ಶನ ತರಬೇತಿ

0

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ಆ.28 ರಂದು ಕಾಲೇಜು ಸಭಾಂಗಣದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವೃತಿ ಮಾರ್ಗದರ್ಶನ’ ತರಬೇತಿಯು ನಡೆಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ನಿಟ್ಟೆ ವಿಶ್ವವಿದ್ಯಾನಿಲಯದ ಮಾರ್ಕೆಟಿಂಗ್ ಮ್ಯಾನೇಜರ್ ಆಗಿರುವ ವಿವೇಕ್ ರಂಜನ್ ಭಂಡಾರಿ ಮಾತನಾಡಿ, ವೃತ್ತಿ ಮಾರ್ಗದರ್ಶನ ಇಂದಿನ ವಿದ್ಯಾರ್ಥಿಗಳಿಗೆ ಅತ್ಯಂತ ಅವಶ್ಯಕತೆ ಇದ್ದು, ಇಂದು ತಮ್ಮ ಮುಂದೆ ಇರುವ ಅವಕಾಶಗಳು ಮತ್ತು ಆಯ್ಕೆಗಳು ಸದುಪಯೋಗಗೊಳ್ಳಬೇಕಾದರೆ ಸರಿಯಾದ ಮಾರ್ಗದರ್ಶನ ಅಗತ್ಯವಿದೆ. ಮುಖ್ಯವಾಗಿ ಯಾವುದೇ ಕೋರ್ಸುಗಳ ಆಯ್ಕೆ ಮಾಡುವ ಮುನ್ನ ಅಲ್ಲಿರುವ ಅವಕಾಶಗಳ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ ಎಂದು ತಿಳಿಸಿದರು.

ಪಿ.ಯು.ಸಿ ನಂತರದ ಹಲವಾರು ಕೋರ್ಸುಗಳು ಮತ್ತು ವೃತ್ತಿ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡಿದರು.  ಇಂದು ವಿದ್ಯಾರ್ಥಿಗಳು ಕೈಗೊಳ್ಳುವ ಸೂಕ್ತವಾದ ನಿರ್ಣಯಗಳು, ವಿದ್ಯಾರ್ಥಿಗಳಿಗೆ ಉತ್ತಮವಾದ ಭವಿಷ್ಯವನ್ನು ಕಟ್ಟಿ ಕೊಡಬಹುದು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ,
ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಇಂತಹ ಉತ್ತಮವಾದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಿದ ವಿಜ್ಞಾನ ವಿಭಾಗವನ್ನು ಅಭಿನಂದಿಸುತ್ತಾ, ಈ ಕಾರ್ಯಕ್ರಮದ ಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಪ್ರೊ. ವಿವೇಕ್ ಭಂಡಾರಿ ಇವರು ತಮಗೆ ಮಾರ್ಗದರ್ಶನ ಮಾಡಲು ಅತ್ಯಂತ ಸೂಕ್ತ ವ್ಯಕ್ತಿಯಾಗಿದ್ದು, ಮುಂದಿರುವ ಹಲವಾರು ಆಯ್ಕೆಗಳು ಮತ್ತು ಅವಕಾಶಗಳ ಬಗ್ಗೆ ಸವಿವರವಾಗಿ ತಿಳಿದುಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ವೇದಿಕೆಯಲ್ಲಿ ವಿಜ್ಞಾನ ವಿಭಾಗದ ಡೀನ್ ಯಶವಂತ್ ಎಂ.ಡಿ, ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಮಾ ಸ್ವಾಗತಿಸಿ, ಏಂಜಲೀಕ ಮೇಲೊನಿ ಪಿಂಟೋ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here