ರಾಮಕುಂಜ: ಶಾಲಾ ಶಿಕ್ಷಣ ಇಲಾಖೆ ಹಾಗೂ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು ಹಾಗೂ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಮಕುಂಜ ಇದರ ಸಹಯೋಗದೊಂದಿಗೆ ಕಡಬ ವಲಯಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಆ.26ರಂದು ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ಜರಗಿತು.
ಶ್ರೀ ರಾಮಕುಂಜೇಶ್ವರ ವಿದ್ಯಾಲಯದ ಸಂಚಾಲಕ ಶಿವಪ್ರಸಾದ್ ಇಜ್ಜಾವು ಉದ್ಘಾಟಿಸಿದರು. ಶಾಲೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಸುಚೇತಾ, ರಾಮಕುಂಜ ಕ್ಲಸ್ಟರ್‌ನ ಸಿ.ಆರ್.ಪಿ ಮಹೇಶ್ ಎಂ, ಪ್ರೌಢಶಾಲಾ ವಿಭಾಗದ ನೋಡಲ್ ಅಧಿಕಾರಿ ಲೋಕೇಶ್, ಪ್ರಾಥಮಿಕ ಶಾಲಾ ವಿಭಾಗದ ನೋಡೆಲ್ ಅಧಿಕಾರಿ ಚಂದ್ರಶೇಖರ್ ಶುಭಹಾರೈಸಿದರು. ಸಂಸ್ಥೆಯ ಆಡಳಿತ ಅಧಿಕಾರಿ ಆನಂದ ಎಸ್.ಟಿ.ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯನಿ ಗಾಯತ್ರಿ ಯು.ಎನ್.ಸ್ವಾಗತಿಸಿ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯನಿ ಲೋಹಿತಾ ಎ. ವಂದಿಸಿದರು. ಸಹ ಶಿಕ್ಷಕ ಕಿಶೋರ್ ಕುಮಾರ್ ಬಿ.ಕಾರ್ಯಕ್ರಮ ನಿರ್ವಹಿಸಿದ್ದರು. ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮ ಬಿ., ದಿವ್ಯ ಪಿ.ಎನ್., ಕಿಶನ್, ರಾಘವ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು.
ಪ್ರಥಮ, ದ್ವಿತೀಯ ಸ್ಥಾನ:
ವಾಲಿಬಾಲ್ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ 14 ತಂಡಗಳು ಭಾಗವಹಿಸಿದ್ದು ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ತಂಡ ಪ್ರಥಮ ಸ್ಥಾನ ಹಾಗೂ ಕುಂತೂರು ಮಾರ್ ಇವಾನಿಯೋಸ್ ಶಾಲಾ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಒಟ್ಟು 6 ತಂಡಗಳು ಭಾಗವಹಿಸಿದ್ದು ಮರ್ದಾಳ ಗುಡ್ ಶೆಫರ್ಡ್ ಶಾಲಾ ತಂಡ ಪ್ರಥಮ ಹಾಗೂ ಕಡಬ ಕ್ನಾನಾಯ ಜ್ಯೋತಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
17ರ ವಯೋಮಾನದ ಬಾಲಕರ ವಿಭಾಗದಲ್ಲಿ ಒಟ್ಟು 11 ತಂಡಗಳು ಭಾಗವಹಿಸಿದ್ದು ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ತಂಡ ಪ್ರಥಮ, ಆತೂರು ಬದ್ರಿಯಾ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 6 ತಂಡಗಳು ಭಾಗವಹಿಸಿದ್ದು ಪ್ರಥಮ ಸ್ಥಾನವನ್ನು ಮರ್ದಾಳ ಗುಡ್ ಶೆಫರ್ಡ್ ಹಾಗೂ ದ್ವಿತೀಯ ಸ್ಥಾನವನ್ನು ಆಲಂಕಾರು ದುರ್ಗಾಂಬಾ ಶಾಲಾ ತಂಡ ಪಡೆದುಕೊಂಡಿದೆ.